ಉಡುಪಿ : ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಬಿ ಎಸ್. ಯಡಿಯೂರಪ್ಪರವರು ಈಗಾಗಲೇ ಘೋಷಿಸಿರುವ ಮಹಿಳಾ ಮೀನುಗಾರರ ಸಾಲ ಮನ್ನಾ ಯೋಜನೆಯ ಬಗ್ಗೆ ವಿಸ್ಕ್ರತವಾಗಿ ಚರ್ಚಿಸಲು ರಾಜ್ಯ ಸರ್ಕಾರದ ಮೀನುಗಾರಿಕೆ ಬಂದರು ಮತ್ತು ಒಳನಾಡು ಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಯವರ ನೇತೃತ್ವದಲ್ಲಿ ಸಭೆ ಆಯೋಜಿಸಲಾಗಿದೆ.
ಸೆಪ್ಟೆಂಬರ್ 26ರಂದು ಗುರುವಾರ ಮಧ್ಯಾಹ್ನ 3 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ರಜತಾದ್ರಿ ಮಣಿಪಾಲದಲ್ಲಿ ಆಯೋಜಿಸಿರುವ ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು, ಲೀಡ್ ಬ್ಯಾಂಕಿನ ಪ್ರಬಂಧಕರು ಭಾಗವಹಿಸಲಿದ್ದು ಸಾಲ ಮನ್ನಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹಾಗೂ ಯೋಜನೆಯ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಈ ಸಭೆಯಲ್ಲಿ ಜಿಲ್ಲೆಯ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಈ ಸಭೆಯಲ್ಲಿ ಭಾಗವಹಿಸಿ, ಯೋಜನೆಯ ಫಲಾನುಭವಿಗಳಿಗೆ ಮಾಹಿತಿ ನೀಡುವಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್‍ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…