ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ ಭಾರತೀಯ ಜನತಾ ಪಾರ್ಟಿ ಮಹಿಳಾ ಮೀಸಲಾತಿ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಮಹಿಳಾ ಪ್ರಧಾನಿ (ಇಂದಿರಾ ಗಾಂಧಿ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ರಾಷ್ಟ್ರಪತಿ (ಪ್ರತಿಭಾ ಪಾಟೀಲ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಮುಖ್ಯಮಂತ್ರಿ (ಸುಚೇತಾ ಕೃಪಾಲಿನಿ, 1963 ಉತ್ತರ ಪ್ರದೇಶ) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಮಂತ್ರಿ (ರಾಜಕುಮಾರಿ ಅಮೃತ ಕೌರ್, 1947) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ MP (ರಾಧಾಬಾಯಿ ಸುಬಾರಾಯನ್, 1952) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ MLA (ಮುತ್ತುಲಕ್ಷ್ಮೀ ರೆಡ್ಡಿ, 1927) ಮಾಡಿದ್ದು ಕಾಂಗ್ರೆಸ್, ಮೊದಲ ಮಹಿಳಾ ಪಂಚಾಯತ್ ಅಧ್ಯಕ್ಷೆ ಮಾಡಿದ್ದು ಕಾಂಗ್ರೆಸ್. ಇವೆಲ್ಲವೂ ಕಾಂಗ್ರೆಸ್ ನೀಡಿದ ಅವಕಾಶಗಳೇ. ಇದು ಮಹಿಳಾ ಪರ ನಿಲುವಿನ ಜೀವಂತ ಸಾಕ್ಷಿ. ನಮ್ಮ ಗ್ಯಾರಂಟ ಯೋಜನೆಗಳು ಸಹ ಮಹಿಳಾ ಸಬಲೀಕರಣದ ಪರವಾಗಿಯೇ ಇದೆ ಎಂದು ಹೇಳಿದರು.
ಇದನ್ನೂ ಓದಿ:
ಇಂದು ಬಿಜೆಪಿ ನಮ್ಮ ಮೇಲೆ ಮಾಡುತ್ತಿರುವ “ಮಹಿಳಾ ವಿರೋಧಿ” ಎಂಬ ಆರೋಪ ಸಂಪೂರ್ಣ ಸುಳ್ಳು ಮತ್ತು ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ. ಇದು ಪೂರ್ವಯೋಜಿತ. ಮಹಿಳಾ ಮೀಸಲಾತಿ ಜೊತೆಗೆ ಕ್ಷೇತ್ರ ವಿಂಗಡಣೆ ವಿಷಯವನ್ನೂ ಜೋಡಿಸಿದ್ದರಿಂದ ಸೋಲಾಯಿತು. ಬಿಜೆಪಿಗೆ ಸೋಲುವುದು ಮೊದಲೇ ಗೊತ್ತಿತ್ತು. ಹಾಗಾಗಿ ಕಾಂಗ್ರೆಸ್ ಮೇಲೆ ಆರೋಪ ಹೊರಿಸಲು ವ್ಯವಸ್ಥಿತಿ ಕುತಂತ್ರ ಮಾಡಿದೆ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ನಾವು ವಿರೋಧಿಸಿದ್ದು ಅದನ್ನು ಕ್ಷೇತ್ರ ಮರುವಿಂಗಡಣೆ ಮತ್ತು ಜನಗಣತಿ ಜೊತೆ ಕಟ್ಟಿ ಹಾಕಿದ ವಿಧಾನ. ಮಹಿಳೆಯರಿಗೆ 33% ಮೀಸಲಾತಿ ನೀಡಬೇಕೆಂದಿದ್ದರೆ, ಅದನ್ನು ಈಗಿನ ಲೋಕಸಭಾ ಸ್ಥಾನಗಳಲ್ಲೇ ತಕ್ಷಣ ಜಾರಿಗೆ ತರಬಹುದಿತ್ತು. 2023ರಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಲೋಕಸಭೆಯಲ್ಲಿ ಪಾಸ್ ಆದಾಗ ಪ್ರಧಾನಿ ಮತ್ತು ಗೃಹ ಸಚಿವರು ಇದೊಂದು ಐತಿಹಾಸಿಕ ಬಿಲ್ ಎಂದು ಹೇಳಿ ಜಾರಿಗೊಳಿಸದಿರುವುದೇಕೆ ಎಂದು ಪ್ರಶ್ನಿಸಿದ ಅವರು, ಬಿಜೆಪಿ ಉದ್ದೇಶಪೂರ್ವಕವಾಗಿ ಜನಗಣತಿ ಮತ್ತು ಕ್ಷೇತ್ರ ವಿಂಗಡಣೆ ಎಂಬ ಷರತ್ತುಗಳನ್ನು ಸೇರಿಸಿ ಅದನ್ನು ವಿಳಂಬಗೊಳಿಸಿದೆ ಎಂದು ಹೇಳಿದರು.
ಇದನ್ನೂ ಓದಿ:
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…