Featured

ಮಹಿಳಾ ಸುರಕ್ಷತೆಯ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿ ಬೆಂಗಳೂರು ನಗರ : ಡಾ.ಜಿ.ಪರಮೇಶ್ವರ್‌ – vishwanews24

ಮಹಿಳಾ ಸುರಕ್ಷತೆಯ ಪಟ್ಟಿಯಲ್ಲಿ ಬೆಂಗಳೂರು ನಗರ ಮೊದಲನೇ ಸ್ಥಾನದಲ್ಲಿರುವುದು ನಿಜಕ್ಕೂ ಹೆಮ್ಮೆಯ ವಿಚಾರ : ಡಾ.ಜಿ.ಪರಮೇಶ್ವರ್‌

ಬೆಂಗಳೂರು : ಮಹಿಳೆಯರ ವಾಸಕ್ಕೆ ದೇಶದ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಬೆಂಗಳೂರು ನಗರ ಮೊದಲನೇ ಸ್ಥಾನದಲ್ಲಿರುವುದು ನಿಜಕ್ಕೂ ಹೆಮ್ಮೆಯ ವಿಚಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರಕ್ಷತೆ, ತಂತಜ್ಞಾನ, ಮೂಲಸೌಕರ್ಯ ಸೇರಿದಂತೆ ಕೆಲವು ಮಾನದಂಡಗಳನ್ನು ಇಟ್ಟುಕೊಂಡು ಚೆನ್ನೈ ಮೂಲದ ಅವತಾರ್ ಗ್ರೂಪ್ ಪ್ರಕಟಿಸಿರುವ ‘ಭಾರತದಲ್ಲಿ ಮಹಿಳೆಯರಿಗಾಗಿ ಅತ್ಯುತ್ತಮ ನಗರಗಳ’ ಪಟ್ಟಿಯಲ್ಲಿ ಬೆಂಗಳೂರು ನಗರ 53.29 ಅಂಕಗಳನ್ನು ಪಡೆದು, ಮೊದಲನೇ ಸ್ಥಾನದಲ್ಲಿದ್ದು, ಇದಕ್ಕೆ ಕಾರಣಿಭೂತರಾದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಈ ಹಿಂದೆಯೂ ಸಹ ನ್ಯಾಯ ಒದಗಿಸುವುದರಲ್ಲಿ ಕರ್ನಾಟಕ ಪೊಲೀಸ್ ಸಮರ್ಥವಾಗಿ ಕೆಲಸ ಮಾಡಿದೆ ಎಂದು ಮೊದಲ ಸ್ಥಾನ ಬಂದಿತ್ತು.‌ ವಿರೋಧ ಪಕ್ಷದವರು ದಿನನಿತ್ಯ ಬೆಂಗಳೂರಿನ ಬಗ್ಗೆ ಟೀಕೆಗಳನ್ನು ಮಾಡುತ್ತಾರೆ. ಈ ವರದಿಯು ಅವರಿಗೆ ಉತ್ತರವಾಗಲಿದೆ ಎಂದು ಹೇಳಿದರು.

ಈ ಬಾರಿಯ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ, ಯಾರಿಗೂ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗಿತ್ತು.‌ ಬೆಂಗಳೂರು ನಗರ ಪೊಲೀಸ್ ಕಮಾಂಡ್ ಸೆಂಟರ್‌ಗೆ ಹೋಗಿ ರಾತ್ರಿ 2 ಗಂಟೆವರೆಗೆ ನೋಡಿದ್ದೇನೆ. ಬೆಂಗಳೂರಿಗೆ ನಿಜವಾಗಿ ಇದು ಹೆಮ್ಮೆಯ ವಿಷಯ ಎಂದು ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago