Featured

ಮಹಿಳೆಯರಿಗೆ ಎರಡು ದಿನ ಅಯ್ಯಪ್ಪ ಸ್ವಾಮಿ ದರ್ಶನ : ಸುರ್ಪೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ಕೇರಳ ಸರಕಾರ

ಕೊಚ್ಚಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯ ಪ್ರವೇಶ ತೀರ್ಪನ್ನು ಮರು ಪರಿಶೀಲಿಸುವಂತೆ ಸುರ್ಪೀಂ ಕೋರ್ಟ್‌ಗೆ ಮನವಿಯನ್ನೂ ಸಲ್ಲಿಸಿದ್ದಾರೆ. ಈ ಬೆಳವಣಿಗೆಗಳ ಮಧ್ಯೆ ಮಹಿಳೆಯರಿಗೆಂದೇ ಪ್ರತ್ಯೇಕ ದಿನ ನಿಗದಿ ಮಾಡಬಹುದೆಂದು ಕೇರಳ ಸರ್ಕಾರ ಹೇಳಿದೆ.

ಶಬರಿಮಲೆ ದೇವಾಲಯ ಪ್ರವೇಶಿಸಲು ಮಹಿಳೆಯರಿಗೆಂದೇ ಪ್ರತ್ಯೇಕವಾಗಿ ಎರಡು ದಿನಗಳನ್ನು ನಿಗದಿಪಡಿಸಬಹುದು ಎಂದು ಕೇರಳ ಸರ್ಕಾರವು ಶುಕ್ರವಾರ ಹೈಕೋರ್ಟ್‌ಗೆ ತನ್ನ ಅಭಿಪ್ರಾಯ ತಿಳಿಸಿದೆ.

‘ಮಹಿಳೆಯರು ದೇಗುಲ ಪ್ರವೇಶಿಸಲು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ್ದರೂ ದೇವಾಲಯ ಪ್ರವೇಶಿಸಲು ಅವಕಾಶ ನೀಡುವುದಿಲ್ಲ ಎಂದು ಕೆಲವು ರಾಜಕೀಯ ಸಂಘಟನೆಗಳು ಬೆದರಿಕೆ ಹಾಕಿವೆ. ಹೀಗಾಗಿ ನಮಗೆ ಭದ್ರತೆ ಕೊಡಿ’ ಎಂದು ನಾಲ್ವರು ಮಹಿಳೆಯರು ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರದಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರದ ಅಭಿಪ್ರಾಯವನ್ನು  ಕೇಳಿತ್ತು.

ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು ಮಹಿಳೆಯರಿಗೇ ಪ್ರತ್ಯೇಕ ದಿನವನ್ನು ಮೀಸಲಿರಿಸಿದರೆ ಸಮಸ್ಯೆ ಬಗೆಹರಿಯಬಹುದು. ಈ ಬಗ್ಗೆ ತಿರುವಾಂಕೂರು ದೇವಸ್ವ ಮಂಡಳಿಯ ಜತೆ ಮಾತನಾಡುತ್ತೇವೆ ಎಂದು ಸರ್ಕಾರ ಕೋರ್ಟ್‌ಗೆ ತಿಳಿಸಿದೆ.

ವಿಚಾರಣೆ ವೇಳೆ ರಾಜ್ಯ ಸರ್ಕಾರ, ಮಹಿಳೆಯರು ಮಾಡಿದ ಸಲಹೆಯ ಮೇರೆಗೆ ತೀರ್ಥಯಾತ್ರೆ ಕಾಲದಲ್ಲಿ ದೇವಾಲಯದಲ್ಲಿ ಪ್ರಾರ್ಥನೆಗಳನ್ನು ಸಲ್ಲಿಸಲು ಎಲ್ಲಾ ವಯಸ್ಸಿನ ಮಹಿಳೆಯರಿಗೆ ಎರಡು ದಿನಗಳನ್ನು ಪ್ರತ್ಯೇಕವಾಗಿ ಮೀಸಲಿರಿಸಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿತು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

4 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

5 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

5 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

6 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

6 hours ago