Featured

ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕುರುಡರಾಗಬೇಡಿ , ಈ ಕುರಿತು ಧ್ವನಿ ಎತ್ತಿ : ನಟಿ ರಮ್ಯಾ -Vishwanews24

ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕುರುಡರಾಗಬೇಡಿ , ಈ ಕುರಿತು ಧ್ವನಿ ಎತ್ತಿ : ನಟಿ ರಮ್ಯಾ -Vishwanews24

ಬೆಂಗಳೂರು : ಮಹಿಳೆಯ ಮೇಲೆ ಪುರುಷನೊಬ್ಬ ದೌರ್ಜನ್ಯ ಎಸಗಿದರೂ ಕೊನೆಗೆ ದೂಷಣೆಗೆ ಒಳಗಾಗುವುದು ಮಹಿಳೆಯೇ. ಹಾಗಾಗಿ ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕುರುಡರಾಗಬೇಡಿ. ಈ ಕುರಿತು ಧ್ವನಿ ಎತ್ತಿ ಎಂದು ಮಾಜಿ ಸಂಸದೆ, ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿ ಮೇಲೆ ಮೈಸೂರಿನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದಕ್ಕೆ ಸಂಬಂಧಿಸಿದಂತೆ ಯುವಕ–ಯುವತಿ ರಾತ್ರಿ 7.30ಕ್ಕೆ ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಆ ವೇಳೆಯಲ್ಲಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿದ್ದ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಇನ್ನು ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿರುವ ರಮ್ಯಾ, “ಇದು ನಿನ್ನ ತಪ್ಪು, ನೀನು ಆ ರೀತಿ ಮಾತನಾಡಬಾರದಿತ್ತು, ನೀನು ಆ ರೀತಿ ಮಾಡಬಾರದಿತ್ತು, ನೀನು ಆ ಉಡುಪನ್ನು ಧರಿಸಬಾರದಿತ್ತು, ತಡರಾತ್ರಿ ನೀನು ಹೊರಗೆ ಹೋಗಬಾರದಿತ್ತು, ಹೊರಗೇ ಹೋಗಬಾರದಿತ್ತು, ಮೇಕ್‌ಅಪ್‌ ಹಾಕಿಕೊಳ್ಳಬಾರದಿತ್ತು, ಯಾಕೆ ಕೆಂಪುಬಣ್ಣದ ಲಿಪ್‌ಸ್ಟಿಕ್‌..ಹೀಗೆ ನೀನು ಅದು ಮಾಡಬಾರದಿತ್ತು…ಇದು ಮಾಡಬಾರದಿತ್ತು…ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು…ಈ ಅವಿವೇಕದ ಮಾತುಗಳು ಸಾಕು. ಪ್ರಾಮಾಣಿಕವಾಗಿ ಹೇಳಬೇಕಂದರೆ ಈ ದೂಷಣೆಯನ್ನು ನಾನೂ ಎದುರಿಸಿದ್ದೇನೆ. ಇದು ಇಂದಿಗೆ ಕೊನೆಯಾಗಲಿ” ಎಂದು ಬರೆದುಕೊಂಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago