ಬೆಂಗಳೂರು : ಮಹಿಳೆಯ ಮೇಲೆ ಪುರುಷನೊಬ್ಬ ದೌರ್ಜನ್ಯ ಎಸಗಿದರೂ ಕೊನೆಗೆ ದೂಷಣೆಗೆ ಒಳಗಾಗುವುದು ಮಹಿಳೆಯೇ. ಹಾಗಾಗಿ ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕುರುಡರಾಗಬೇಡಿ. ಈ ಕುರಿತು ಧ್ವನಿ ಎತ್ತಿ ಎಂದು ಮಾಜಿ ಸಂಸದೆ, ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿದ್ಯಾರ್ಥಿನಿ ಮೇಲೆ ಮೈಸೂರಿನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದಕ್ಕೆ ಸಂಬಂಧಿಸಿದಂತೆ ಯುವಕ–ಯುವತಿ ರಾತ್ರಿ 7.30ಕ್ಕೆ ನಿರ್ಜನ ಪ್ರದೇಶಕ್ಕೆ ಹೋಗಿದ್ದಾರೆ. ಆ ವೇಳೆಯಲ್ಲಿ ಅಲ್ಲಿಗೆ ಹೋಗಬಾರದಿತ್ತು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿದ್ದ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.
ಇನ್ನು ಈ ಕುರಿತು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ರಮ್ಯಾ, “ಇದು ನಿನ್ನ ತಪ್ಪು, ನೀನು ಆ ರೀತಿ ಮಾತನಾಡಬಾರದಿತ್ತು, ನೀನು ಆ ರೀತಿ ಮಾಡಬಾರದಿತ್ತು, ನೀನು ಆ ಉಡುಪನ್ನು ಧರಿಸಬಾರದಿತ್ತು, ತಡರಾತ್ರಿ ನೀನು ಹೊರಗೆ ಹೋಗಬಾರದಿತ್ತು, ಹೊರಗೇ ಹೋಗಬಾರದಿತ್ತು, ಮೇಕ್‌ಅಪ್ ಹಾಕಿಕೊಳ್ಳಬಾರದಿತ್ತು, ಯಾಕೆ ಕೆಂಪುಬಣ್ಣದ ಲಿಪ್‌ಸ್ಟಿಕ್..ಹೀಗೆ ನೀನು ಅದು ಮಾಡಬಾರದಿತ್ತು…ಇದು ಮಾಡಬಾರದಿತ್ತು…ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು…ಈ ಅವಿವೇಕದ ಮಾತುಗಳು ಸಾಕು. ಪ್ರಾಮಾಣಿಕವಾಗಿ ಹೇಳಬೇಕಂದರೆ ಈ ದೂಷಣೆಯನ್ನು ನಾನೂ ಎದುರಿಸಿದ್ದೇನೆ. ಇದು ಇಂದಿಗೆ ಕೊನೆಯಾಗಲಿ” ಎಂದು ಬರೆದುಕೊಂಡಿದ್ದಾರೆ.
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…
ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…
ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ)…
ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ…
ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…