ಚೆನ್ನೈ: ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಬೇಡಿ. ಬಳಸಿದರೆ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಜೋಸೆಫ್ ವಿಜಯ್ ನಟಿ ತ್ರಿಷಾ ವಿರುದ್ಧ ಡಬಲ್ ಮೀನಿಂಗ್ ಮಾತನಾಡಿದ್ದ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್‌ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಅವರು, ರಾಜಕೀಯ ಟೀಕೆ ಮಾಡಿ. ಸರ್ಕಾರದ ಯೋಜನೆಗಳನ್ನು ಟೀಕಿಸಿ. ಆದರೆ ವಾಕ್ ಸ್ವಾತಂತ್ರ್ಯದ ನೆಪದಲ್ಲಿ ಮಹಿಳೆಯರ ನಿಂದನೆ ಬೇಡ. ರಾಜಕೀಯ ಟೀಕೆ ಮಾಡುವಾಗ ಮಹಿಳೆಯರಿಗೆ ಅಗೌರವ ಬೇಡ. ಮಹಿಳೆಯನ್ನು ಗೌರವಿಸಿ. ಮಾನಹಾನಿಯಾಗುವಂತ ಹೇಳಿಕೆ ನೀಡಿದರೆ ಕಾನೂನು ಕ್ರಮ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಹಿಂದೆ ಜಯಲಲಿತಾ ಅವರಿಗೆ ಅವಮಾನಿಸಿದ್ದ ಬಗ್ಗೆ ನೆನಪಸಿಕೊಂಡು ಮಾತನಾಡಿದ ಅವರು, ನನ್ನ ರಾಜಕೀಯ ಗೆಲುವಿನ ಹಿಂದಿನ ಪ್ರಮುಖ ಕಾರಣವೆಂದರೆ ಅದು ಮಹಿಳೆಯರು. ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿ ಮಾತನಾಡುವುದನ್ನು ನಾನು ಸಹಿಸಲ್ಲ. ರಾಜಕೀಯದಲ್ಲಿ ಯಾರೂ ಯಾರನ್ನು ಬೇಕಾದರೂ ಟೀಕಿಸಬಹುದು. ಎಲ್ಲವನ್ನು ಜನ ನೋಡುತ್ತಿರುತ್ತಾರೆ. ಆದರೆ ರಾಜಕೀಯ ಹೆಸರಿನಲ್ಲಿ ನಾವು ನಮ್ಮ ಜನರನ್ನು, ಮಹಿಳೆಯರನ್ನು ವೈಯಕ್ತಿಕವಾಗಿ, ಕೀಳಾಗಿ ಟೀಕಿಸುವುದು ಸರಿಯಲ್ಲ. ಹಾಗೇ ಮಾತನಾಡಬೇಡಿ ಎಂದು ವಿನಂತಿಸಿದ್ದಾರೆ.
ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ನಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುವುದು : ಸಚಿವ ಕೆ.ಜೆ ಜಾರ್ಜ್ ಉಡುಪಿ…
ಮಂಗಳೂರು ನಗರ ಕಮೀಷನರೇಟ್ ಡಿಸಿಪಿಯಾಗಿ ಸ್ಯಾಮ್ ವರ್ಗಿಸ್ ನೇಮಕ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ…
ಪಡುಬಿದ್ರಿ : ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ ಉಡುಪಿ: ಪಡುಬಿದ್ರಿ ವ್ಯಾಪ್ತಿಯ ಕಡಲ್ಕೊರೆತ ಪ್ರದೇಶಕ್ಕೆ ಪ್ರವಾಸೋದ್ಯಮ ಸಚಿವ…
ಮಳೆಗಾಲದಲ್ಲೂ ಬೇಸಿಗೆಯ ಬಿಸಿಲು: ರಾಜ್ಯದಲ್ಲಿ ತಾಪಮಾನ ಏರಿಕೆ ಬೆಂಗಳೂರು: ರಾಜ್ಯದಲ್ಲಿ ಮಳೆ ಕೈಕೊಟ್ಟ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ…
ಬಿಜೆಪಿಯದ್ದು ಪೇಡ್ ಪಾದಯಾತ್ರೆ :ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆ ಕೇವಲ…
ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಭಾರಿ ಬೆಂಕಿ ಅವಘಡ : ರೈಲು ಬೋಗಿ ಸುಟ್ಟು ಕರಕಲು ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ…