ಬೆಂಗಳೂರು:ಮಹಿಳಾ ಮೀಸಲಿಗೆ ತಡೆವೊಡ್ಡಿದ ಕಾಂಗ್ರೆಸ್ ಕೋಟ್ಯಂತರ ಮಹಿಳೆಯರಿಗೆ ದ್ರೋಹ ಬಗೆದಿದೆ. ಮಹಿಳೆಯರ ಶಕ್ತಿ ನಿರ್ಲಕ್ಷಿಸಿದ ಕಾಂಗ್ರೆಸ್ ಅನ್ನು ದೇಶದ ಜನ ಕ್ಷಮಿಸುವುದಿಲ್ಲ. ಮುಂಬರುವ ರಾಜ್ಯಗಳ ಚುನಾವಣೆಯಲ್ಲಿ ಜನರು ಬುದ್ಧಿ ಕಲಿಸಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಹೇಳಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹಿಳಾ ಮೀಸಲು ಮಸೂದೆಗೆ ಸೋಲಾಗಿದ್ದು ಸಾಮಾನ್ಯ ವಿಚಾರ ಅಲ್ಲ. ಇದು ರಾಜಕೀಯ ಪಕ್ಷಗಳ ಪಿತೂರಿ, ನಿರ್ಲಕ್ಷ್ಯ, ಮಹಿಳಾ ವಿರೋಧಿ ಭಾವನೆಯ ಸ್ಪಷ್ಟ ಸಂಕೇತ ಎಂದರು.
ದೇಶದ ಇತಿಹಾಸದಲ್ಲೇ ಮಹಿಳೆಯರಿಗೆ ಅವರ ಹಕ್ಕನ್ನು ಸಂವಿಧಾನದತ್ತವಾಗಿ ಕೊಡುವ ತೀರ್ಮಾನವನ್ನು ನರೇಂದ್ರ ಮೋದಿ ಅವರು ಮಾಡಿದ್ದರು. ಆದರೆ ಇದಕ್ಕೆ ಕಾಂಗ್ರೆಸ್ ಬೆಂಬಲ ನೀಡದೆ ಕೋಟ್ಯಂತರ ಮಹಿಳೆಯರ ಕನಸುಗಳ ಮೇಲೆ ಹೊಡೆತ ನೀಡಿತು. ಇದು ಕೇವಲ ಮಸೂದೆ ವಿಫಲತೆ ಅಲ್ಲ. ಮಹಿಳೆಯರ ಹಕ್ಕನ್ನು ನಿರ್ಲಕ್ಷ್ಯ ಮಾಡುವ ಕಾಂಗ್ರೆಸ್ ಅನ್ನು ಜನ ಕ್ಷಮಿಸುವುದಿಲ್ಲ ಎಂದು ವಿವರಿಸಿದರು.
ಇದನ್ನೂ ಓದಿ :
ಮಹಿಳಾ ಮೀಸಲು ಮಸೂದೆ ಸರ್ವಾನುಮತದಿಂದ ಬೆಂಬಲ ಸಿಗಬೇಕಿತ್ತು. ಆದರೆ ಬೆಂಬಲ ನೀಡದೆ ವಿಧಾನಸಭೆಗೆ ಸಂಸತ್ತಿಗೆ ಹೋಗುತ್ತೇವೆ ಎಂಬ ಮಹಿಳೆಯರ ಕನಸನ್ನು ನುಚ್ಚು ನೂರು ಮಾಡಿದೆ. ಮಹಿಳೆಯರ ಶಾಪ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳಿಗೆ ತಟ್ಟದೇ ಬಿಡುವುದಿಲ್ಲ ಎಂದರು. ಕಳೆದ 70 ವರ್ಷಗಳಿಂದ ಅಧಿಕಾರ ನಡೆಸಿದ ಕಾಂಗ್ರೆಸ್, ಮಹಿಳೆಯ ಹಕ್ಕಿನ ಬಗ್ಗೆ ವೇದಿಕೆಗಳಲ್ಲಿ ದೊಡ್ಡ ದೊಡ್ಡ ಭಾಷಣ ಮಾಡಿತು. ಆದರೆ ಕಾರ್ಯರೂಪಕ್ಕೆ ತರಲಿಲ್ಲ. ಮೀಸಲು ಮಸೂದೆಗೆ ಬೆಂಬಲ ಕೊಡುವ ಧೈರ್ಯ ಇಲ್ಲದ ಮೇಲೆ ಮಹಿಳೆಯರ ಬಗ್ಗೆ ಮಾತನಾಡುವ ಅಧಿಕಾರವೂ ಕಾಂಗ್ರೆಸ್‍ಗೆ ಇಲ್ಲ. ಆದ್ದರಿಂದ ಮಹಿಳಾ ಕಾಂಗ್ರೆಸ್ ಘಟಕವನ್ನು ರದ್ದು ಮಾಡಿ ಎಂದು ಸಲಹೆ ನೀಡಿದರು.
ಕಾಂಗ್ರೆಸ್ಸಿಗರೇ ಇನ್ನೆಷ್ಟು ಕಾಲ ದಿನ, ವರ್ಷ ಮಹಿಳೆಯರನ್ನು ಕೇವಲ ಮತದಾರರಾಗಿ ಬಳಸುತ್ತೀರಿ. ಮಹಿಳೆಯರು ದುರ್ಬಲರು ಎಂದುಕೊಂಡು ನೆಹರು, ಇಂದಿರಾ, ಸೋನಿಯಾ ರಾಜ್ಯಭಾರ ಮಾಡಿದ್ದರಲ್ಲ. ಆಗ ನಿಮಗೆ ಅವರ ಶಕ್ತಿ ಬಗ್ಗೆ ತಿಳಿಯಲಿಲ್ಲವೇ ಎಂದರು. ಮಹಿಳಾ ಮೀಸಲಿಗೆ ಮೋದಿ ಅವರು ಮುಂದಾದರೆ ವಿರೋಧಿಸಿ ಹೀನ ಕಾರ್ಯ ಮಾಡಿದ್ದೀರಿ. ಇದು ಕಾಂಗ್ರೆಸ್ ರಕ್ತದಲ್ಲೇ ಇರುವ ವಿರೋಧಿ ನೀತಿ ಎಂದು ನುಡಿದರು.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…