Featured

ಮಹಿಳೆಯರ ಸುರಕ್ಷತೆಗೆ ಮಹಿಳಾ ಪೊಲೀಸ್ ಒಳಗೊಂಡ ಅಕ್ಕ ಪಡೆ  ಶೀಘ್ರವೇ ಜಾರಿಗೆ: ಲಕ್ಷ್ಮಿ ಹೆಬ್ಬಾಳ್ಕರ್ – vishwanews24

ಮಹಿಳೆಯರ ಸುರಕ್ಷತೆಗೆ ಮಹಿಳಾ ಪೊಲೀಸ್ ಒಳಗೊಂಡ ಅಕ್ಕ ಪಡೆ  ಶೀಘ್ರವೇ ಜಾರಿಗೆ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಶಾಲಾ – ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕ ಪಡೆ  ಶೀಘ್ರವೇ ಜಾರಿಗೆ ಬರಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  ಹೇಳಿದ್ದಾರೆ.

ಮಳೆಗಾಲದ ಅಧಿವೇಶನದ ಮೂರನೇ ದಿನವಾದ ಬುಧವಾರ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅಗಸ್ಟ್ 15ರಿಂದ ಬೆಳಗಾವಿ, ಮೈಸೂರು ಹಾಗೂ ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಅಕ್ಕ ಪಡೆ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಕೆಲವು ಸಮುದಾಯ ಮತ್ತು ಪಂಗಡಗಳಲ್ಲಿ ಆಚರಣೆಯಲ್ಲಿರುವ ಸಾಮಾಜಿಕ ಪದ್ಧತಿಗಳಿಂದಾಗಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಇದರಿಂದಾಗಿ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಬಾಲಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಬಾಲ್ಯವಿವಾಹ ಸಾಮಾಜಿಕ ಪಿಡುಗಾಗಿದ್ದು, ಇದನ್ನು ಬೇರುಮಟ್ಟದಿಂದ ಕಿತ್ತೊಗೆಯಬೇಕು. ಬಾಲ್ಯವಿವಾಹ ತಡೆಗಟ್ಟಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ಇದಕ್ಕೆ ಎಲ್ಲರ ಸಹಕಾರವೂ ಅಗತ್ಯ ಎಂದು ಹೇಳಿದರು.

ಬಾಲ್ಯವಿವಾಹಗಳನ್ನು ತಡೆಗಟ್ಟಲು ಸರ್ಕಾರ ಈಗಾಗಲೇ ಕಾಯ್ದೆಯನ್ನು ಜಾರಿಗೆ ತಂದಿದೆ. ನಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಮಕ್ಕಳ ರಕ್ಷಣಾ ಸಮಿತಿ (ಸಿಡಬ್ಲ್ಯುಸಿ) ಕಾರ್ಯನಿರ್ವಹಿಸುತ್ತಿದ್ದು, ಬೆಂಗಳೂರಿನಲ್ಲಿ 4 ಕೇಂದ್ರಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ತಲಾ ಒಂದು ಸಿಡಬ್ಲ್ಯುಸಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದರು.

ಬಾಲ್ಯ ವಿವಾಹ ತಡೆಗಟ್ಟುವ ಸಲುವಾಗಿ ಸೋಷಿಯಲ್ ಮೀಡಿಯಾಗಳಿಗೆ ಕಡಿವಾಣ ಹಾಕಬೇಕು. ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಗೃಹ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಇಲಾಖೆಗಳು ಜಂಟಿಯಾಗಿ ಕಾರ್ಯನಿರ್ವಹಿಸಲಿವೆ ಎಂದು ನುಡಿದರು.

ಮಕ್ಕಳ ಸುರಕ್ಷತೆಗಾಗಿ ಮಕ್ಕಳ ಸಹಾಯವಾಣಿ 1098 ಸಂಖ್ಯೆಯೂ ದಿನದ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟದಲ್ಲಿರುವ ಮಗುವಿನ ಬಗ್ಗೆ ಯಾವುದೇ ಸಮಯದಲ್ಲಿ ಕರೆ ಬಂದರೂ ತಕ್ಷಣ ಮಗುವನ್ನು ರಕ್ಷಿಸಲು ಸಂಬಂಧಿಸಿದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗುತ್ತಾರೆ ಎಂದು ಮಾಹಿತಿ ನೀಡಿದರು

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago