ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ, ಜಾತಿನಿಂದನೆ ಸೇರಿದಂತೆ ಒಟ್ಟು ಆರು ಕೃತ್ಯಗಳನ್ನು ಎಸಗಿದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನಗೆ ಇದೀಗ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣದ ತನಿಖೆ ನಡೆಸಿದ ಸಿಐಡಿ ಎಸ್‌ಐಟಿ ಅಧಿಕಾರಿಗಳು ಮೂರು ಪ್ರಕರಣಗಳಲ್ಲಿ ಸೂಕ್ತ ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಆ ಮೂಲಕ, ಅತ್ಯಾಚಾರ ಮಾಡಿಸಿದ್ದರು ಎನ್ನಲಾಗಿದ್ದ ಆರೋಪದಡಿ ತನಿಖೆ ಎದುರಿಸಿದ್ದ ಮುನಿರತ್ನಗೆ ಕ್ಲೀನ್ ಚಿಟ್ ಸಿಕ್ಕಿದೆ.
ಸಿಐಡಿ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಮುನಿರತ್ನ, “ಇದು ಸತ್ಯಕ್ಕೆ ಸಂದ ಜಯವಾಗಿದೆ. ಕಂಡವರ ಹೆಣ್ಣು ಮಕ್ಕಳಿಂದ ದೂರು ಕೊಡಿಸುವುದನ್ನು ಬಿಡಬೇಕು. ಡಿಕೆ ಸುರೇಶ್ ಸೋತ ನಂತರ, ಕುಸುಮಾ ಸೋತ ನಂತರ ನನ್ನ ವಿರುದ್ಧ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗಿವೆ. ಯಾರಿಗೆ ಯಾವುದೂ ಶಾಶ್ವತವಲ್ಲ, ನಾನು ಎಲ್ಲವನ್ನು ದೇವರಿಗೆ ಬಿಟ್ಟಿದ್ದೇನೆ. ಸುದ್ದಿಗೋಷ್ಠಿ ನಡೆಸಿ, ಎಲ್ಲ ಮಾಹಿತಿಗಳನ್ನು ಹಂಚಿಕೊಳ್ಳುತ್ತೇನೆ” ಎಂದು ತಿಳಿಸಿದರು.
ಏನಿದು ಪ್ರಕರಣ?
2025 ಮೇ 20 ರಂದು ಸುಮಾರು 40 ವರ್ಷ ವಯಸ್ಸಿನ ಮಹಿಳೆ ನಗರದ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶಾಸಕ ಮುನಿರತ್ನ ಸೇರಿದಂತೆ ಅವರ ಬೆಂಬಲಿಗರು ಗ್ಯಾಂಗ್ ರೇಪ್ ಮಾಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಈ ಬಗ್ಗೆ ಆರ್‌ಎಂಸಿ ಯಾರ್ಡ್ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಿದ್ದರು. ನಂತರ ಸರ್ಕಾರ ಪ್ರಕರಣವನ್ನು ಸಿಐಡಿ ಎಸ್‌ಐಟಿ ತನಿಖೆಗೆ ವಹಿಸಿತ್ತು. ಕಳೆದ ಐದು ತಿಂಗಳಿನಿಂದ ತನಿಖೆ ನಡೆಸಿದ ಎಸ್‌ಐಟಿ ತಂಡವು ಸಾಕ್ಷ್ಯಧಾರಗಳ ಕೊರತೆ ಹಿನ್ನೆಲೆಯಲ್ಲಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ. ರಿಪೋರ್ಟ್ ಸಲ್ಲಿಕೆ ಮಾಡಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…