ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ : ಮೈಸೂರು ಪೊಲೀಸ್ ಆಯುಕ್ತ ರಮೇಶ್​ ಬಾನೋತ್ – Vishwanews24

Featured, ರಾಜ್ಯ ನ್ಯೂಸ್

ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ : ಮೈಸೂರು ಪೊಲೀಸ್ ಆಯುಕ್ತ ರಮೇಶ್​ ಬಾನೋತ್

ಮೈಸೂರು: ವಿವಾದಿತ ಮಹಿಷಾ ದಸರಾ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್​ ಬಾನೋತ್​ ಅನುಮತಿ ನೀಡಿದ್ದು ಆದೇಶ ಹೊರಬಿದ್ದಿದೆ.ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಮೈಸೂರಿನ ಪುರಭವನದಲ್ಲಿ ಮಹಿಷಾ ದಸರಾ ನಡೆಯಲಿದೆ.

ಮೆರವಣಿಗೆ, ರ್ಯಾಲಿ, ಪ್ರತಿಭಟನೆ ಮಾಡಬಾರದು. ನೇರವಾಗಿ ಸಭಾ ಕಾರ್ಯಕ್ರಮ ಪ್ರಾರಂಭಿಸಬೇಕು. ಪಟಾಕಿ ಸಿಡಿಸಿ ಸಂಭ್ರಮ ಆಚರಿಸಬಾರದು. ಧಾರ್ಮಿಕ ಭಾವನೆ ಕೆಣಕುವ, ಪ್ರಚೋದನೆ ನೀಡುವ ಭಾಷಣ ಮಾಡಬಾರದು ಎಂದು ಷರತ್ತುಗಳೊಂದಿಗೆ ಪೊಲೀಸರು ಅನುಮತಿ ನೀಡಿದ್ದಾರೆ.

 

Leave a Reply