Featured

ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೀವಿ, ಆರೋಪ ಮಾಡುವುದಾದರೆ ದಾಖಲೆ ಇಟ್ಟು ಮಾತನಾಡಬೇಕು : ಡಿಕೆ ಶಿವಕುಮಾರ್‌ – vishwanews24

ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೀವಿ, ಆರೋಪ ಮಾಡುವುದಾದರೆ ದಾಖಲೆ ಇಟ್ಟು ಮಾತನಾಡಬೇಕು : ಡಿಕೆ ಶಿವಕುಮಾರ್

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೀವಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸರು ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಮೊಹಂತಿ ಮತ್ತು ತಂಡ ಕ್ಲೀನ್‌ ಆಗಿ ಕೆಲಸ ಮಾಡುತ್ತಿದೆ. ಬಿಎಲ್‌ ಸಂತೋಷ್‌ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. ರಾಜಕೀಯವಾಗಿ ನಮಗೂ ಅವರಿಗೂ 100 ವಿರೋಧ ಇರಬಹುದು. ಏನೇ ಹೋರಾಟ ಮಾಡುವುದಿದ್ದರೂ ಸೈದ್ಧಾಂತಿಕವಾಗಿ ಮಾಡಬೇಕು. ಅದನ್ನು ಬಿಟ್ಟು ವೈಯಕ್ತಿಕವಾಗಿ ತೇಜೋವಧೆ ಮಾಡಬಾರದು ಎಂದರು.

ಈ ಹಿಂದೆ ಆ ವ್ಯಕ್ತಿ ನನ್ನ ವಿರುದ್ಧವೂ ಮಾತನಾಡಿದ್ದ. ಸಿಎಂ ವಿರುದ್ಧವೂ ಮಾತನಾಡಿದ್ದ. ಆರೋಪ ಮಾಡುವುದಾದರೆ ದಾಖಲೆ ಇಟ್ಟು ಮಾತನಾಡಬೇಕು. ಮಾತನಾಡಿದನ ಹತ್ತಿರ ಏನು ದಾಖಲೆ ಇದೆ? ವಿರೋಧಿಗಳ ವಿರುದ್ಧ ಮಾತನಾಡಿದ್ದಾನೆ ಅಂತ ನಾವು ಖುಷಿ ಪಡುವುದಲ್ಲ. ಮುಂದೆ ನಮ್ಮ ವಿರುದ್ಧವೂ ಆತ ಮಾತನಾಡಬಹುದು. ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಇವುಗಳಿಗೆಲ್ಲ ನಾವು ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

14 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

15 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

15 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

16 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

17 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

17 hours ago