ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೀವಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಮೊಹಂತಿ ಮತ್ತು ತಂಡ ಕ್ಲೀನ್ ಆಗಿ ಕೆಲಸ ಮಾಡುತ್ತಿದೆ. ಬಿಎಲ್ ಸಂತೋಷ್ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. ರಾಜಕೀಯವಾಗಿ ನಮಗೂ ಅವರಿಗೂ 100 ವಿರೋಧ ಇರಬಹುದು. ಏನೇ ಹೋರಾಟ ಮಾಡುವುದಿದ್ದರೂ ಸೈದ್ಧಾಂತಿಕವಾಗಿ ಮಾಡಬೇಕು. ಅದನ್ನು ಬಿಟ್ಟು ವೈಯಕ್ತಿಕವಾಗಿ ತೇಜೋವಧೆ ಮಾಡಬಾರದು ಎಂದರು.
ಈ ಹಿಂದೆ ಆ ವ್ಯಕ್ತಿ ನನ್ನ ವಿರುದ್ಧವೂ ಮಾತನಾಡಿದ್ದ. ಸಿಎಂ ವಿರುದ್ಧವೂ ಮಾತನಾಡಿದ್ದ. ಆರೋಪ ಮಾಡುವುದಾದರೆ ದಾಖಲೆ ಇಟ್ಟು ಮಾತನಾಡಬೇಕು. ಮಾತನಾಡಿದನ ಹತ್ತಿರ ಏನು ದಾಖಲೆ ಇದೆ? ವಿರೋಧಿಗಳ ವಿರುದ್ಧ ಮಾತನಾಡಿದ್ದಾನೆ ಅಂತ ನಾವು ಖುಷಿ ಪಡುವುದಲ್ಲ. ಮುಂದೆ ನಮ್ಮ ವಿರುದ್ಧವೂ ಆತ ಮಾತನಾಡಬಹುದು. ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಇವುಗಳಿಗೆಲ್ಲ ನಾವು ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…