ಬೆಂಗಳೂರು : ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಗಡಿಪಾರು ಆದೇಶವನ್ನು ಹೈಕೋರ್ಟ್ ರದ್ದು ಪಡಿಸಿದೆ. ಅಲ್ಲದೇ ಸೂಕ್ತ ಕಾರಣ, ಸೆಕ್ಷನ್ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆ ನೀಡಿದೆ.
ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು.
ಗಡಿಪಾರು ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾ ಸೂರಜ್ ಗೋವಿಂದರಾಜು ಪೀಠದಲ್ಲಿ ನಡೆಯಿತು. ವಿಚಾರಣೆ ವೇಳೆ ಗಡಿಪಾರು ಅಗತ್ಯ ಇದ್ದರೆ ಮತ್ತೊಮ್ಮೆ ಹೊಸದಾಗಿ ಕಾನೂನಿನ ಪ್ರಕಾರವಾಗಿ 15 ದಿನದ ಒಳಗಡೆ ಆದೇಶ ಮಾಡಲು ಪುತ್ತೂರು ಎಸಿಗೆ ಹೈಕೋರ್ಟ್ ಅವಕಾಶ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…