ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ
ದಕ್ಷಿಣ ಕನ್ನಡ: ಮಾಂಡೌಸ್ ಚಂಡಮಾರುತ ರಾಜ್ಯಾಧ್ಯಂತ ಅಬ್ಬರಿಸುತ್ತಿದೆ. ಚಳಿಗಾಳಿಯ ಸಹಿತ ತುಂತುರು ಮಳೆಗೆ ಜನತೆ ತತ್ತರಿಸಿ ಹೋಗಿದ್ದಾರೆ. ಇದೇ ವೇಳೆ ಚಂಡಮಾರುತದ ಕಾರಣ ಕರಾವಳಿ ಜಿಲ್ಲೆಯಲ್ಲಿ ಆಳ ಸಮುದ್ರದ ಮೀನುಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ.
ವಾಯುಭಾರ ಕುಸಿತದಿಂದಾಗಿ ವೇಗವಾದಂತ ಗಾಳಿ ಬೀಸೋದಕ್ಕೆ ಶುರುವಾಗಿದೆ. ಜೊತೆ ಚಂಡಮಾರುತದ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಇದು ಮೀನುಗಾರಿಕೆ ನಡೆಸೋದಕ್ಕೆ ಅಪಾಯಕಾರಿ ಎಂದು ಹೇಳಲಾಗಿದೆ.
ಈ ಹಿನ್ನಲೆಯಲ್ಲಿಯೇ ರಾಜ್ಯದ ಸರ್ವಋತು ಬಂದರು ಖ್ಯಾತಿಯ ಕಾರವಾರದ ಬೈತಖೋಲ್ ನಲ್ಲಿ ನೂರಕ್ಕೂ ಹೆಚ್ಚು ಬೋಟ್ ಗಳು ಆಳ ಸಮುದ್ರದ ಮೀನುಗಾರಿಕೆ ಸ್ಥಗಿತಗೊಳಿಸಿ ಲಂಗರು ಹಾಕಿವೆ.
ಕರಾವಳಿಯಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…