Featured

ಮಾಜಿ ಕೇಂದ್ರ ಗೃಹ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಶಿವರಾಜ್ ಪಾಟೀಲ್ ನಿಧನ – vishwanews24

ಮಾಜಿ ಕೇಂದ್ರ ಗೃಹ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಶಿವರಾಜ್ ಪಾಟೀಲ್ ನಿಧನ

ನವದೆಹಲಿ : ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಶಿವರಾಜ್ ಪಾಟೀಲ್(91) ಅವರು ಮಹಾರಾಷ್ಟ್ರದ ಲಾತೂರ್‌ನಲ್ಲಿನ ತಮ್ಮ ನಿವಾಸದಲ್ಲಿ ಶುಕ್ರವಾರ ಬೆಳಗ್ಗೆ 6.30ಕ್ಕೆ ಕೊನೆಯುಸಿರೆಳೆದಿದ್ದಾರೆ. ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಪಾಟೀಲ್ ಅವರು, ತೀವ್ರ ಅನಾರೋಗ್ಯ ಉಂಟಾದ ಪರಿಣಾಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಎಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪಾಟೀಲ್ 1980 ರಿಂದ 2004 ರವರೆಗೆ ಸತತವಾಗಿ ಏಳು ಬಾರಿ ಲಾತೂರ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 1980, 1984, 1989, 1991, 1996, ೧೯೯೮ ಮತ್ತು 1999 ರಲ್ಲಿ ಲಾತೂರ್ ಕ್ಷೇತ್ರವನ್ನು ಗೆದ್ದಿದ್ದರು. ನಂತರ 2004 ರಲ್ಲಿ ಬಿಜೆಪಿಯ ರೂಪತೈ ಪಾಟೀಲ್ ನೀಲಂಗೇಕರ್ ವಿರುದ್ಧ ಸೋತಿದ್ದರು. 1972 ಮತ್ತು 1978 ರಲ್ಲಿ ಲಾತೂರ್ ವಿಧಾನಸಭಾ ಕ್ಷೇತ್ರವನ್ನೂ ಗೆದಿದ್ದರು.

ಪಾಟೀಲ್ ರಾಜಕೀಯ ಜೀವನದಲ್ಲಿ, ಹಲವಾರು ಪ್ರತಿಷ್ಠಿತ ಹುದ್ದೆಗಳನ್ನು ಅಲಂಕರಿಸಿದ್ದರು. ಲಾತೂರ್ ನಿಂದ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. 2008 ರಲ್ಲಿ ಪಾಟೀಲ್ ದೇಶದ ಗೃಹ ಸಚಿವರಾಗಿದ್ದರು. ಭದ್ರತಾ ಲೋಪಗಳ ಬಗ್ಗೆ ಟೀಕೆಗಳು ಬಂದ ನಂತರ ಅವರು ರಾಜೀನಾಮೆ ನೀಡಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago