ಮಾಜಿ ಕ್ರಿಕೆಟಿಗೆ ಗೌತಮ್ ಗಂಭೀರ್ ಬಿಜೆಪಿ ಸೇರ್ಪಡೆ , ಮೋದಿ ಅವರ ಸೇವೆಯಲ್ಲಿ ನಾನೂ ಕೂಡ ಕೈ ಜೋಡಿಸಬೇಕು :ಗೌತಮ್ ಗಂಭೀರ್ – Vishwanews24
ನವದೆಹಲಿ: ಮಾಜಿ ಕ್ರಿಕೆಟಿಗೆ ಗೌತಮ್ ಗಂಭೀರ್ ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿರುವ ಗೌತಮ್ ಗಂಭೀರ್, ಈ ಹಿಂದಿನಿಂದಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಪರ ನಿಲುವುಗಳನ್ನು ಪ್ರಕಟಿಸಿಕೊಂಡು ಬಂದಿದ್ದರು.
ಟೀಂ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟ್ಸಮನ್ ಗೌತಮ್ ಗಂಭೀರ್ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, ಇಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ದೆಹಲಿಯಲ್ಲಿ ಇಂದು ಗೌತಮ್ ಗಂಭೀರ್ ಕೇಂದ್ರ ಸಚಿವರಾದ ಅರುಣ್ ಜೇಟ್ಲಿ ಮತ್ತು ರವಿಶಂಕರ್ ಪ್ರಸಾದ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮೂಲಗಳ ಪ್ರಕಾರ ದೆಹಲಿಯ 7 ಲೋಕಸಭಾ ಕ್ಷೇತ್ರಗಳ ಪೈಕಿ ಯಾವುದಾದರೂ ಒಂದು ಕ್ಷೇತ್ರದಿಂದ ಗೌತಿ ಬಿಜೆಪಿ ಪಕ್ಷದ ಪರವಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಗೌತಿ, ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ನಾನೂ ಸ್ಪೂರ್ತಿಗೊಂಡಿದ್ದೇನೆ. ಅವರ ಸೇವೆಯಲ್ಲಿ ನಾನೂ ಕೂಡ ಕೈ ಜೋಡಿಸಬೇಕು ಎನ್ನುವ ಸಲುವಾಗಿ ನಾನು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದು ಹೇಳಿದ್ದಾರೆ.
Gautam Gambhir: I am joining this party(BJP) after getting influenced by PM Narendra Modi's vision. I am honoured to get the opportunity to join this platform pic.twitter.com/barD8XA7W9
— ANI (@ANI) March 22, 2019
