ನ್ಯೂಯಾರ್ಕ್: ವರ್ಲ್ಡ್ ರೆಸ್ಲಿಂಗ್ ಎಂಟರ್‌ಟೈನ್‌ಮೆಂಟ್ ಸ್ಟಾರ್ ಬ್ರೇ ವ್ಯಾಟ್ ಗುರುವಾರ ನಿಧನರಾಗಿದ್ದಾರೆ ಎಂದು ಕಂಪನಿಯ ಸಿಸಿಒ ಪಾಲ್ “ಟ್ರಿಪಲ್ ಎಚ್” ಲೆವೆಸ್ಕ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದೆ.
36 ವರ್ಷದ ಬ್ರೇ ವ್ಯಾಟ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ನಮ್ಮ ಡಬ್ಲ್ಯೂ ಡಬ್ಲ್ಯೂಇ ಕುಟುಂಬದಲ್ಲಿ ಬ್ರೇ ವ್ಯಾಟ್ ಎಂದು ಕರೆಯಲ್ಪಡುವ ವಿಂಡಮ್ ರೊಟುಂಡಾ ಅವರು ಇಂದು ಮುಂಜಾನೆ ಅನಿರೀಕ್ಷಿತವಾಗಿ ನಿಧನರಾದರು ಎಂಬ ದುರಂತ ಸುದ್ದಿಯನ್ನು ನಮಗೆ ತಿಳಿಸಿದರು. ನಮ್ಮ ಪ್ರಾರ್ಥನೆಗಳು ಅವರ ಕುಟುಂಬದೊಂದಿಗೆ ಇದೆ” ಎಂದು ತ್ರಿಪಲ್ ಎಚ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಇಎಸ್‌ಪಿಎನ್ ಪ್ರಕಾರ, ಬ್ರೇ ವ್ಯಾಟ್ ಅವರ ನಿಜವಾದ ಹೆಸರು ವಿಂಡ್‌ಹ್ಯಾಮ್ ರೋಟುಂಡಾ. ಆರೋಗ್ಯ ಸಮಸ್ಯೆಯೊಂದಿಗೆ ಬಳಲುತ್ತಿದ್ದ ಅವರು ಕಳೆದ ಹಲವಾರು ತಿಂಗಳುಗಳಿಂದ ಡಬ್ಲ್ಯೂ ಡಬ್ಲ್ಯೂಇ ನಲ್ಲಿ ಭಾಗವಹಿಸಿಲ್ಲ ಎನ್ನಲಾಗಿದೆ. ವ್ಯಾಟ್ ಒಂದು ಬಾರಿ ಡಬ್ಲ್ಯೂಡಬ್ಲ್ಯೂಇ ಚಾಂಪಿಯನ್ ಶಿಪ್ ಮತ್ತು ಎರಡು ಬಾರಿ ಯುನಿವರ್ಸಲ್ ಚಾಂಪಿಯನ್‌ಶಿಪ್ ಸೇರಿದಂತೆ ಡಬ್ಲ್ಯೂ ಡಬ್ಲ್ಯೂಇ ನಲ್ಲಿ ಮೂರು ಬಾರಿ ವಿಶ್ವ ಚಾಂಪಿಯನ್ ಆಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…