ಬೆಂಗಳೂರು : ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ನಡೆದಿದೆ.
ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ತಡರಾತ್ರಿ 2 ಸುತ್ತಿನ ಗುಂಡಿನ ದಾಳಿ ನಡೆದಿದೆ. ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಶೂಟೌಟ್ ಮಾಡಿದ್ದಾರೆ. ರಿಕ್ಕಿ ರೈ ಅವರ ಮೂಗು, ಕೈಗೆ ಗುಂಡು ತಾಕಿ ಗಾಯಗೊಂಡಿದ್ದಾರೆ.
ಪ್ರತಿ ಬಾರಿ ರಿಕ್ಕಿ ರೈ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ರಿಕ್ಕಿ ರೈ ಮೇಲೆ 2 ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಆದರೆ ಹಿಂಬದಿ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರಿಗೆ ಗಾಯಗಳಾಗಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಸ್ಥಳಕ್ಕೆ ರಾಮನಗರ ಎಸ್‌ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್‌ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…