Featured

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಕರಾಳ ತುರ್ತು ಪರಿಸ್ಥಿತಿಯನ್ನು ಯಾತಕ್ಕಾಗಿ ಹೇರಿದರು ಎಂದು ವೆರೋನಿಕಾ ಕರ್ನೆಲಿಯೋ ಸ್ಪಷ್ಟಪಡಿಸಲಿ : ಉಡುಪಿ ಜಿಲ್ಲಾ ಬಿಜೆಪಿ -Vishwanews24

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಕರಾಳ ತುರ್ತು ಪರಿಸ್ಥಿತಿಯನ್ನು ಯಾತಕ್ಕಾಗಿ ಹೇರಿದರು ಎಂದು ವೆರೋನಿಕಾ ಕರ್ನೆಲಿಯೋ ಸ್ಪಷ್ಟಪಡಿಸಲಿ;

ವೆರೋನಿಕಾ ಸಹಿತ ಕಾಂಗ್ರೆಸ್ ನಾಯಕರಿಗೆ ಆರ್‌ಎಸ್‌ಎಸ್ ಮತ್ತು ಪ್ರಧಾನಿ ಮೋದಿಯವರ ಹೆಸರೆತ್ತುವ ಯೋಗ್ಯತೆ ಇಲ್ಲ : ಉಡುಪಿ ಜಿಲ್ಲಾ ಬಿಜೆಪಿ

ಅಸಂಖ್ಯಾತ ಭಾರತೀಯರ ಹೋರಾಟ ಹಾಗೂ ಬಲಿದಾನದ ಫಲವಾಗಿ ದೊರೆತ ಸ್ವಾತಂತ್ರ÷್ಯವನ್ನು ಸರ್ವಾಧಿಕಾರಿ ಧೋರಣೆಯಿಂದ ಹತ್ತಿಕ್ಕಿ ಕೇವಲ ತನ್ನ ಅಧಿಕಾರ ಉಳಿಸಿಕೊಳ್ಳಲು ಮಾಜಿ ಪ್ರಧಾನಿ ಕಾಂಗ್ರೆಸ್ಸಿನ ಇಂದಿರಾ ಗಾಂಧಿಯವರು ದೇಶದ ಮೇಲೆ ಹೇರಿದ ಕರಾಳ ತುರ್ತುಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳುವ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋರವರಿಗೆ ನಾಚಿಕೆಯಾಗಬೇಕು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿಯವರಿಗೆ ಇಂದಿರಾ ಗಾಂಧಿಯವರ ಹೆಸರು ಹೇಳುವ ಯೋಗ್ಯತೆ ಇಲ್ಲ ಎಂದಿರುವ ವೆರೋನಿಕಾ ಕರ್ನೆಲಿಯೋರವರು ದೇಶದಲ್ಲಿ ಅರಾಜಕತೆ, ದೊಂಬಿ, ಯುದ್ಧ, ಪ್ರವಾಹ ಅಥವಾ ಬರ ಪರಿಸ್ಥಿತಿ ಇಲ್ಲದೇ ಇದ್ದ ಕಾಲದಲ್ಲಿ ಇಂದಿರಾ ಗಾಂಧಿಯವರು ಯಾವ ಕಾರಣಕ್ಕೆ ತುರ್ತು ಪರಿಸ್ಥಿತಿಯನ್ನು ಹೇರಿಕೆ ಮಾಡಿದ್ದಾರೆ ಎಂದು ಮೊದಲು ಸ್ಪಷ್ಟಪಡಿಸಲಿ. ಸದಾ ನಕಲಿ ಗಾಂಧಿ ಕುಟುಂಬಕ್ಕೆ ಬಹುಪರಾಕ್ ಹೇಳುವ ವೆರೋನಿಕಾ ಸಹಿತ ಕಾಂಗ್ರೆಸ್ ನಾಯಕರಿಗೆ ಆರ್‌ಎಸ್‌ಎಸ್ ಹಾಗೂ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಹೆಸರೆತ್ತುವ ಯೋಗ್ಯತೆ ಇಲ್ಲ ಎಂದು ಉಡುಪಿ ಜಿಲ್ಲಾ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

೧೯೭೧ರ ಲೋಕಸಭೆಯ ಮಧ್ಯಂತರ ಚುನಾವಣೆಯಲ್ಲಿ ನಡೆಸಿದ ಆಕ್ರಮಗಳ ಕಾರಣಕ್ಕೆ ೧೯೭೫ರಲ್ಲಿ ತನ್ನ ಲೋಕಸಭಾ ಸದಸ್ಯತ್ವದ ಆಯ್ಕೆಯನ್ನು ರದ್ದುಗೊಳಿಸಿ ೬ ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ನ್ಯಾಯಾಲಯ ನೀಡಿದ ತೀರ್ಪನ್ನೇ ತಿರಸ್ಕರಿಸಿದ ಇಂದಿರಾ ಗಾಂಧಿಯವರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಜೂನ್ ೨೫, ೧೯೭೫ರಂದು ತುರ್ತು ಪರಿಸ್ಥಿತಿಯನ್ನು ಘೋಷಿಸಿ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ತಳ್ಳಿರುವುದು ಹಾಗೂ ಪತ್ರಿಕಾ ಸ್ವಾತಂತ್ರ್ಯ ದ ಹರಣದ ಜೊತೆಗೆ ಮಾನವ ಹಕ್ಕುಗಳನ್ನು ಮೊಟಕುಗೊಳಿಸಿರುವುದು ದೇಶದ ಕರಾಳ ಇತಿಹಾಸವಾಗಿದ್ದರೂ ಕೆರ್ನೆಲಿಯೋರವರು ಮಾತ್ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ನಡೆದ ಧಮನಕಾರಿ ಕೆಟ್ಟ ಸಂಗತಿಗಳನ್ನು ಅಧಿಕಾರಿಗಳ ತಲೆಗೆ ಕಟ್ಟಲು ಹೊರಟಿರುವುದು ಹಾಸ್ಯಾಸ್ಪದವಾಗಿದೆ ಹಾಗೂ ಅವರ ರಾಜಕೀಯ ಅನುಭವದ ಅಪಕ್ವತೆಯನ್ನು ಬಿಂಬಿಸುತ್ತದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ತಿಳಿಸಿದ್ದಾರೆ.

ಸ್ವಾತಂತ್ರ್ಯ ನಂತರ ಬ್ರಹ್ಮಾಂಡ ಭ್ರಷ್ಟಾಚಾರದೊಂದಿಗೆ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿರುವ ಕಾಂಗ್ರೆಸ್ ಒಂದೇ ಕುಟುಂಬದ ಹಿತ ಕಾಯಲು ಪಣತೊಟ್ಟು ದೇಶದ ಹಿತ ಮರೆತಿರುವುದು ಗತ ಇತಿಹಾಸ. ಇದರ ಫಲವಾಗಿ ಇಂದು ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರು ಎರಡು ಸಾವಿರ ಕೋಟಿ ರೂಪಾಯಿಗೂ ಮಿಕ್ಕಿದ ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಸಿಲುಕಿ ಇ.ಡಿ. ವಿಚಾರಣೆಯನ್ನು ಎದುರಿಸುತ್ತಿರುವುದು ವಾಸ್ತವ. ದೇಶದೆಲ್ಲೆಡೆ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಕಳೆದುಕೊಂಡು ತೀವ್ರ ಅಧ:ಪತನದತ್ತ ಸಾಗುತ್ತಿದ್ದರೂ, ದೇಶಭಕ್ತ ಸಂಘಟನೆ ಆರ್.ಎಸ್.ಎಸ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ದೂಷಿಸುವುದು ಹಾಗೂ ಕಾಂಗ್ರೆಸ್ಸಿನ ನಾಯಕರು ಜೈಲಿನಿಂದ ಬಿಡುಗಡೆಯಾದಾಗ ಹಾರ ತುರಾಯಿಯೊಂದಿಗೆ ವಿಜೃಂಭಿಸುವುದು ಹಾಗೂ ಇ.ಡಿ. ವಿಚಾರಣೆಗೆ ಹೋಗುವಾಗ ಮೆರವಣಿಗೆ, ಪ್ರತಿಭಟನೆಯ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿರುವುದು ಕಾಂಗ್ರೆಸ್‌ನ ದಯನೀಯ ಸ್ಥಿತಿಗೆ ಹಿಡಿದ ಕೈಗನ್ನಡಿಯಂತಿದೆ.

ಸ್ವಾತಂತ್ರ್ಯ ನಂತರ ಕಾಂಗ್ರೆಸ್ಸಿನ ದುರಾಡಳಿತ ದೇಶದ ಅಭಿವೃದ್ಧಿ ಮತ್ತು ಏಳಿಗೆಗೆ ಸ್ಪೀಡ್ ಬ್ರೇಕರ್‌ನಂತಾಗಿದೆ. ಹಿಂಬಾಗಿಲಿನಿAದ ಅಧಿಕಾರ ಪಡೆದ ಜವಾಹರಲಾಲ್ ನೆಹರೂರವರಿಂದ ಪ್ರಾರಂಭಿಸಿ ರಿಮೋಟ್ ಕಂಟ್ರೋಲ್ ಪ್ರಧಾನಿಯೆಂದೇ ಬಿಂಬಿತರಾದ ಮನಮೋಹನ್ ಸಿಂಗ್‌ರವರ ವರೆಗೆ ದೇಶವನ್ನಾಳಿದ ಕಾಂಗ್ರೆಸ್ ದೇಶದ ಭದ್ರತೆ, ಗಡಿಗಳ ರಕ್ಷಣೆ, ಆರೋಗ್ಯ, ಮೂಲ ಸೌಕರ್ಯಗಳನ್ನು ಕಡೆಗಣಿಸಿ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿರುವ ಫಲವಾಗಿ ದೇಶದೆಲ್ಲೆಡೆ ತಿರಸ್ಕçತಗೊಂಡು ಅವನತಿಯ ಅಂಚಿನಲ್ಲಿದೆ. ಇಂದು ಉತ್ತಮ ಆಡಳಿತ, ಸೇವೆ ಮತ್ತು ಬಡವರ ಕಲ್ಯಾಣಕ್ಕೆ ಒತ್ತು ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ಜನಪರ ಮತ್ತು ಅಭಿವೃದ್ಧಿ ಪರ ಆಡಳಿತದ ಹೊಸ ಶಕೆಗೆ ನಾಂದಿ ಹಾಡಿ ಜನಬೆಂಬಲ ಗಳಿಸುತ್ತಿದೆ ಎಂದು ಗುರುಪ್ರಸಾದ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

21 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

21 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

21 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

21 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

22 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago