Featured

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಮಾದರಿಯಲ್ಲಿ ನರೇಂದ್ರ ಮೋದಿ ಹತ್ಯೆಗೆ ಸಂಚು?

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಹತ್ಯೆಗೆ ಮಾವೋವಾದಿಗಳು ಸಂಚು ರೂಪಿಸಿರುವ ಕುರಿತು ಪುಣೆ ಪೋಲೀಸರಿಗೆ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ನಿಷೇಧಿತ ಮಾವೋವಾದಿ ಸಂಘಟನೆ ಸಿಪಿಐನೊಂದಿಗೆ ಸಂಬಂಧ ಹೊಂದಿರುವ ಸಂಬಂಧ ಪೊಲೀಸರು ಬಂಧಿಸಿರುವ ಐವರು ವ್ಯಕ್ತಿಗಳಲ್ಲಿ ಓರ್ವನ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿರುವ ಕುರಿತು ಪತ್ರವೊಂದು ದೊರಕಿದೆ.

ಪತ್ರದಲ್ಲಿ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆಯಾದ ರೀತಿಯಲ್ಲೇ ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡುವ ಕುರಿತು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ಕೋರ್ಟ್‌ಗೆ ತಿಳಿಸಿದ್ದಾರೆ.

ಡಿಸೆಂಬರ್‌ನಲ್ಲಿ ನಡೆದ ‘ಎಲ್ಗರ್ ಪರಿಷತ್’ ಮತ್ತು ಭೀಮಾ-ಕೊರೆಗಾಂವ್ ಹಿಂಸೆಗೆ ಸಂಬಂಧಿಸಿದಂತೆ ಬುಧವಾರ ಮುಂಬೈನಲ್ಲಿ ದಲಿತ ಹೋರಾಟಗಾರ ಸುಧೀರ್‌ ದಾವಾಲೆ, ವಕೀಲ ಸುರೇಂದ್ರ ಗಾಡ್ಲಿಂಗ್‌, ಮಹೇಶ್‌ ರಾವತ್‌, ಶೋಮಾ ಸೇನ್‌ ಮತ್ತು ರೋನಾ ವಿಲ್ಸನ್‌ರನ್ನು ಪೊಲೀಸರು ಬಂಧಿಸಿದ್ದರು.

ಇವರಲ್ಲಿ ದೆಹಲಿಯ ರೋನಾ ವಿಲ್ಸನ್‌ ಮನೆಯಲ್ಲಿ ದೊರೆತ ಪತ್ರದಲ್ಲಿ ಎಂ-4 ರೈಫಲ್‌ ಖರೀದಿಗೆ ಮತ್ತು ಇತರೆ ಕೆಲಸಕ್ಕಾಗಿ 8 ಕೋಟಿ ರೂಪಾಯಿ ಅಗತ್ಯವಿರುವ ಕುರಿತು ಉಲ್ಲೇಖಿಸಿ ರಾಜೀವ್‌ ಗಾಂಧಿ ಹತ್ಯೆಯಂತೆ ಮತ್ತೊಂದು ಅವಘಡ ಸೃಷ್ಟಿಸುವ ಕುರಿತು ತಿಳಿಸಲಾಗಿತ್ತು ಎಂದು ವಕೀಲ ಉಜ್ವಲ್‌ ಪವಾರ್‌ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಆರೋಪಿಗಳ ಮನೆಯಲ್ಲಿ ಸಿಕ್ಕಿರುವ ಇತರೇ ಪತ್ರಗಳಲ್ಲಿ ‘ಎಲ್ಗರ್ ಪರಿಷತ್’, ಭೀಮಾ-ಕೊರೆಗಾಂವ್ ಹಿಂಸೆ ಮತ್ತು ಇತರೇ ಮಾವೋವಾದಿಗಳಿಂದ ನಡೆದ ದಾಳಿಗಳ ಕುರಿತಾಗಿ ಸಾಕ್ಷ್ಯಗಳನ್ನು ಒದಗಿಸಿವೆ ಎಂದು ತಿಳಿಸಿದ್ದಾರೆ

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago