ನವದೆಹಲಿ: ಬಿಜೆಪಿಯ ಮಾಜಿ ಸಂಸದ ಶರದ್ ತ್ರಿಪಾಠಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಲಿವರ್ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ತ್ರಿಪಾಠಿ(49) ಬುಧವಾರ ರಾತ್ರಿ ಮೃತಪಟ್ಟಿದ್ದಾರೆ ಹರ್ಯಾಣದ ಮೇದಾಂತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ತ್ರಿಪಾಠಿ 2014ರಲ್ಲಿ ಉತ್ತರ ಪ್ರದೇಶದ ಸಂತ ಕಬೀರ್ ನಗರದ ಲೋಕಸಭಾ ಸ್ಥಾನದಿಂದ ಸಂಸತ್ತಿನ ಸದಸ್ಯರಾಗಿ ಆಯ್ಕೆಯಾಗಿದ್ದರು.
2019ರ ಲೋಕಸಭಾ ಚುನಾವಣೆಗೆ ಮುನ್ನ ಸಭೆ ನಡೆಯುತ್ತಿದ್ದಾಗ ಮೆನ್ಡಾವಲ್ ಬಿಜೆಪಿ ಶಾಸಕ ರಾಕೇಶ್ ಸಿಂಗ್ ಶೂನಿಂದ ಹೊಡೆದಿದ್ದರಿಂದ ಇವರ ಹೆಸರು ಚರ್ಚೆಯಾಗಿತ್ತು. ಸದ್ಯ ತ್ರಿಪಾಠಿಯವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.
ಶರದ್ ತ್ರಿಪಾಠಿಯವರ ಅಕಾಲಿಕ ನಿಧನವು ನನ್ನನ್ನು ಮಾತ್ರವಲ್ಲದೇ ಇನ್ನೂ ಅನೇಕರಿಗೆ ದುಃಖ ತರಿಸಿದೆ. ಅವರು ಸಮಾಜಕ್ಕೆ ಸೇವೆ ಸಲ್ಲಿಸುವ ಹಾಗೂ ದೀನ ದಲಿತರಿಗಾಗಿ ಕೆಲಸ ಮಾಡುಲು ಇಷ್ಟಪಟ್ಟವರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಅವರ ಸಾವನ್ನು ತಡೆಕೊಳ್ಳುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡುವ ಮೂಲಕ ಮೋದಿ ಸಂತಾಪ ಸೂಚಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…