ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರು ಮಂಗಳವಾರ (ಡಿ.10) ಮುಂಜಾನೆ ಅಸುನೀಗಿದ್ದಾರೆ. ಮುತ್ಸದ್ದಿ ರಾಜಕಾರಣಿಯ ನಿಧನದ ಕಾರಣದಿಂದ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚಾರಣೆ ಘೋಷಿಸಿದೆ.
ಎಸ್.ಎಂ.ಕೃಷ್ಣ ನಿಧನದ ಕಾರಣದಿಂದ ಬುಧವಾರ (ಡಿ.11) ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳಿಗೂ ಬುಧವಾರ ರಜೆ ಇರಲಿದೆ.
ಎಸ್.ಎಂ.ಕೆ ಅವರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಗೌರವಗಳೊಂದಿಗೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಶಿವನಗರದ ನಿವಾಸದಲ್ಲಿ ಮಂಗಳವಾರ ಇಡೀ ದಿನ ಇಡಲಾಗುವುದು. ಕೃಷ್ಣ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ನೆರವೇರಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ಫುಟ್‌ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…