Featured

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ್‌ ನಾಪತ್ತೆ ; ಪೊಲೀಸರಿಂದ ತೀವ್ರ ಶೋಧ -Vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ನಗರದಿಂದ ಉಳ್ಳಾಲ ಕಡೆಗೆ ಹೋಗುವ ಮಾರ್ಗದಲ್ಲಿರುವ ನೇತ್ರಾವತಿ ಸೇತುವೆ ಬಳಿಯಿಂದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ್‌ ನಾಪತ್ತೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರಿಂದ ತೀವ್ರ ಶೋಧ ನಡೆಸಲಾಗುತ್ತಿದೆ.

ಬೆಂಗಳೂರು ನೋಂದಣಿ ಸಂಖ್ಯೆಯ ಕಾರಿನಲ್ಲಿ ಬಂದಿದ್ದ ಸಿದ್ದಾರ್ಥ್‌ ನೇತ್ರಾವತಿ ಸೇತುವೆ ಮೇಲೆ ತೆರಳುತ್ತಿದ್ದಾಗ ಕಡೆಕಾರು ರಸ್ತೆಯಲ್ಲಿ ಹೋಗುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಕಾರು ನಿಲ್ಲಿಸಲು ಹೇಳಿ, ಮೊಬೈಲ್’ನಲ್ಲಿ ಮಾತನಾಡುತ್ತಾ ಕಾರಿನಿಂದ ಇಳಿದು ಮುಂದಕ್ಕೆ ಹೋಗಿದ್ದಾರೆ. ಆ ಬಳಿಕ ನಾಪತ್ತೆ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದಾರೆ. ಸಿದ್ಧಾರ್ಥ ಅವರು ಸೇತುವೆಯ ಮಧ್ಯಭಾಗದಿಂದ ನದಿಗೆ ಹಾರಿರಬಹುದೆಂದು ಶಂಕೆ ಹಿನ್ನೆಲೆಯಲ್ಲಿ ದೇಹಕ್ಕಾಗಿ ಬೋಟ್’ಗಳಲ್ಲಿ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಉದ್ಯಮಿ ಸಿದ್ದಾರ್ಥ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಕಾರಿನ ಡ್ರೈವರ್ ಬಸವರಾಜ್ ಅವರನ್ನು ಕಂಕನಾಡಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಯ ವೇಳೆ ಬಸವರಾಜ್, ಸಾಹೇಬ್ರು ಇಂಗ್ಲಿಷ್’ನಲ್ಲಿ ಮಾತನಾಡುತ್ತಿದ್ದರು. ಹೀಗಾಗಿ ನನಗೆ ಅರ್ಥವಾಗಲಿಲ್ಲ ಎಂದು ಹೇಳಿದ್ದಾರೆ.

ಸಿದ್ಧಾರ್ಥ್ ತಮ್ಮ ಪರ್ಸ್ ಹಾಗೂ ಇನ್ನಿತರ ವಸ್ತುಗಳನ್ನು ಕಾರಿನಲ್ಲೇ ಬಿಟ್ಟು ಹೋಗಿದ್ದು, ಮೊಬೈಲ್’ನಲ್ಲಿ ಮಾತನಾಡಿಕೊಂಡು ಏಕಾಂಗಿಯಾಗಿ ಹೋಗಿದ್ದಾರೆ. ಹೀಗೆ ಹೋದವರು ಕೆಲ ಹೊತ್ತು ಬರದಿದ್ದರಿಂದ ಅವರನ್ನು ಬಸವರಾಜ್ ಅವರು ಕಾರಿನಲ್ಲೇ ಹಿಂಬಾಲಿಸಿಕೊಂಡು ಹೋಗಿದ್ದರು, ಆದರೆ ಸಿದ್ಧಾರ್ಥ್ ಡೈವರ್’ಗೆ ಹಿಂದೆ ಬರದಂತೆ ಹೇಳಿದ್ದಾರೆ ಎನ್ನಲಾಗಿದೆ.

ತಮ್ಮ ಕೆಫೆ ಕಾಫಿ ಡೇ ಮಾಲೀಕ ಉದ್ಯಮಿ ಸಿದ್ಧಾರ್ಥ್ ಅವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಅವರ ಎಬಿಸಿ ಕಾಫಿ ಕ್ಯೂರಿಂಗ್ ಕಂಪನಿಯನ್ನು ಬಂದ್ ಮಾಡಲಾಗಿದೆ. ಪ್ರತಿ ದಿನದಂತೆ ಸಿಬ್ಬಂದಿ ಇಂದು ಕೂಡ ಕೆಲಸಕ್ಕೆ ಹಾಜರಾಗಿದ್ದಾರೆ. ಆದರೆ ಸಿದ್ಧಾರ್ಥ್ ಅವರು ನಾಪತ್ತೆಯಾದ ಹಿನ್ನೆಲೆಯಲ್ಲಿ ಇದೀಗ ಕಂಪನಿಯನ್ನು ಬಂದ್ ಮಾಡಲಾಗಿದೆ.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago