ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ; ಬಳ್ಳಾರಿ ಪ್ರವೇಶಕ್ಕೆ ಅನುಮತಿ – vishwanews24
ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ; ಬಳ್ಳಾರಿ ಪ್ರವೇಶಕ್ಕೆ ಅನುಮತಿ
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್ ದೊರೆತಿದೆ. ಬಳ್ಳಾರಿಗೆ ತೆರಳಲು ಅವರಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ಇದರೊಂದಿಗೆ, ಯಾವುದೇ ಪೂರ್ವಾನುಮತಿ ಇಲ್ಲದೆ ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಅವಕಾಶ ದೊರೆತಂತಾಗಿದೆ.
ಈ ಹಿಂದೆ ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಅವರು ಪೂರ್ವಾನುವತಿ ಪಡೆಯುವುದು ಕಡ್ಡಾಯವಾಗಿತ್ತು. ಅವರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಷರತ್ತು ವಿಧಿಸಿತ್ತು. ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ಹೊರಬಿದ್ದಿದೆ.
ಉಡುಪಿ: ಸರಕಾರಿ ನೌಕರರ ವಸತಿ ಗೃಹಗಳಿಗೆ ನುಗ್ಗಿದ ಕಳ್ಳರು ; ಅಪಾರ ಮೌಲ್ಯದ ನಗ-ನಗದು ಕಳವು – vishwanews24
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಜೈಲುಪಾಲಾಗಿದ್ದರು. ನಂತರ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. 2015 ರ ಜನವರಿ 23 ರಂದು ಸುಪ್ರೀಂ ಕೋರ್ಟ್ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ, ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯವುದನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿತ್ತು
