ಹೊಸದೆಹಲಿ: ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಮಂಗಳವಾರ ಬೆಳಗ್ಗೆ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ . ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಜ್ ಫರ್ನಾಂಡಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು.
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್ ಫರ್ನಾಂಡೀಸ್ ವಾಜಪೇಯಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.
ಮೂಲತಃ ಮಂಗಳೂರಿನವರಾದ ಜಾರ್ಜ್ ಫರ್ನಾಂಡಿಸ್, 1930 ಜೂನ್ 3 ರಂದು ಜನಿಸಿದ್ದರು. ಮಂಗಳೂರಿನ ಸಂತ ಅಲೋಸಿಯಸ್ ಕಾಲೇಜಿನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದರು.
ಜನತಾ ದಳದಲ್ಲಿದ್ದ ಜಾರ್ಜ್ ಫರ್ನಾಂಡಿಸರು ನಂತರ ತಮ್ಮದೇ ಸಮತಾ ಪಕ್ಷ ಆರಂಭಿಸಿದ್ದರು. ಬಿಹಾರದಿಂದ ರಾಜ್ಯಸಭೆಗೆ ಪ್ರತಿನಿಧಿಸುತ್ತಿದ್ದ ಜಾರ್ಜ್ ಫರ್ನಾಂಡಿಸರು ವಾಜಪೇಯಿ ಸರಕಾರದಲ್ಲಿ ರಕ್ಷಣಾ ಸಚಿವರಾಗಿದ್ದರು, ವಿ.ವಿ.ಸಿಂಗ್ ಸರಕಾರದಲ್ಲಿ ರೈಲ್ವೆ ಸಚಿವರಾಗಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…