ಮಾಜಿ ಸಿಎಂ ಎಸ್.‌ ಎಂ ಕೃಷ್ಣ ವಿಧಿವಶ – vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಮಾಜಿ ಸಿಎಂ ಎಸ್.‌ ಎಂ ಕೃಷ್ಣ (93) ಮಂಗಳವಾರ (ಡಿ.10 ರಂದು) ನಸುಕಿನ ಜಾವ 2:45ರ ವೇಳೆಗೆ ವಿಧಿವಶರಾಗಿದ್ದಾರೆ.

ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು. ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ (ಡಿ.11 ರಂದು) ನೆರವೇರಿಸಲಾಗುವುದು ಎಂದು ಎಸ್ ಎಂ ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ

Leave a Reply