ಕಾರವಾರ: ವಿಧಾನಸಭಾ ಚುನಾವಣೆ ಸಮೀಪಿಸುತಿದ್ದಂತೆ ಪಕ್ಷ ತೊರೆದು ಹೊಸ ಪಕ್ಷ ಸೇರುವುದು ನಾಯಕರ ಪಾಲಿಗೆ ಹೊಸದೇನಲ್ಲ. ಆದ್ರೆ ಇದೀಗ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಕ್ಷೇತ್ರದಲ್ಲಿ ಅವರಿಗೆ ಎದುರಾಳಿಯಾಗಿದ್ದ ದಿವಂಗತ ರಾಮಕೃಷ್ಣ ಹೆಗಡೆ ಅವರ ಮೊಮ್ಮಗ ಶಶಿಭೂಷಣ್ ಹೆಗಡೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.
ಶಶಿಭೂಷಣ್ ಹೆಗಡೆ ಹಿಂದೆ ಕುಮಟಾ ಕ್ಷೇತ್ರದಲ್ಲಿ ಎರಡು ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು. 2018 ರಲ್ಲಿ ಶಿರಸಿ ಕ್ಷೇತ್ರದಲ್ಲಿ ಸ್ಪರ್ಧಿಸಿ 26,625 ಮತಗಳನ್ನ ಪಡೆದು 3ನೇ ಸ್ಥಾನದಲ್ಲಿದ್ದರು. ಈ ಹಿಂದೆ 2004 ರಲ್ಲಿ ಕುಮಟಾದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ 31,273 ಮತ ಪಡೆದು ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಕೆ.ಶಟ್ಟಿ ವಿರುದ್ಧ 3,465 ಮತಗಳ ಅಂತರದಿಂದ ಸೋತರೇ, 2008 ರಲ್ಲಿ ಅದೇ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ 30,201 ಮತ ಪಡೆದು ಅಂದಿನ ಜೆಡಿಎಸ್ ಅಭ್ಯರ್ಥಿ ದಿನಕರ್ ಶಟ್ಟಿ ವಿರುದ್ಧ 591 ಮತಗಳ ಅಂತರದಲ್ಲಿ ಸೋಲು ಕಂಡು 3ನೇ ಸ್ಥಾನದಲ್ಲಿದ್ದರು.
ಮೂರು ಸೋಲಿನ ನಂತರ ಜೆಡಿಎಸ್ ನಲ್ಲೇ ತಮ್ಮ ಅಸ್ತಿತ್ವ ಉಳಿಸಿಕೊಂಡು ಶಿರಸಿ ಕ್ಷೇತ್ರದಲ್ಲಿ ತಮ್ಮ ಹಿಡಿತ ಗಟ್ಟಿಗೊಳಿಸಿಕೊಳ್ಳುವ ಪ್ರಯತ್ನದಲ್ಲಿ ಸಾಗಿದ್ದರು. ಈ ಬಾರಿ ಮತ್ತೆ ಸ್ಪರ್ಧಿಸಲು ಅವಕಾಶ ವದಗಿಬಂದರೂ ಸ್ಫರ್ಧಿಸುವ ಮನಸ್ಸು ಮಾಡಲಿಲ್ಲ. ಈ ನಡುವೆ ಕಾಂಗ್ರೆಸ್ ಸಹ ಶಶಿಭೂಷಣ್ ಹೆಗಡೆ ಅವರನ್ನ ಪಕ್ಷಕ್ಕೆ ಸೆಳೆಯಲು ಕಸರತ್ತು ನಡೆಸಿತ್ತು. ಆದರೇ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಯತ್ನದ ಫಲದಿಂದ ಕೊನೆಗೂ ಮತ್ತೆ ಶಶಿಭೂಷಣ್ ಹೆಗಡೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಗೇರಿ ಅವರಿಗೆ ಪ್ರಬಲ ಬ್ರಾಹ್ಮಣ ನಾಯಕರ ಪ್ರತಿಸ್ಪರ್ಧಿ ಇಲ್ಲದಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…