Featured

ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ್ ಹೆಗಡೆ ಬಿಜೆಪಿ ಸೇರ್ಪಡೆ – Vishwanews24

ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ್ ಹೆಗಡೆ ಬಿಜೆಪಿ ಸೇರ್ಪಡೆ

ಕಾರವಾರ: ವಿಧಾನಸಭಾ ಚುನಾವಣೆ  ಸಮೀಪಿಸುತಿದ್ದಂತೆ ಪಕ್ಷ ತೊರೆದು ಹೊಸ ಪಕ್ಷ ಸೇರುವುದು ನಾಯಕರ ಪಾಲಿಗೆ ಹೊಸದೇನಲ್ಲ. ಆದ್ರೆ ಇದೀಗ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಕ್ಷೇತ್ರದಲ್ಲಿ ಅವರಿಗೆ ಎದುರಾಳಿಯಾಗಿದ್ದ ದಿವಂಗತ ರಾಮಕೃಷ್ಣ ಹೆಗಡೆ ಅವರ ಮೊಮ್ಮಗ ಶಶಿಭೂಷಣ್ ಹೆಗಡೆ ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.

ಶಶಿಭೂಷಣ್ ಹೆಗಡೆ ಹಿಂದೆ ಕುಮಟಾ ಕ್ಷೇತ್ರದಲ್ಲಿ ಎರಡು ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಕಡಿಮೆ ಅಂತರದಲ್ಲಿ ಸೋಲು ಕಂಡಿದ್ದರು. 2018 ರಲ್ಲಿ ಶಿರಸಿ ಕ್ಷೇತ್ರದಲ್ಲಿ ಸ್ಪರ್ಧಿಸಿ 26,625 ಮತಗಳನ್ನ ಪಡೆದು 3ನೇ ಸ್ಥಾನದಲ್ಲಿದ್ದರು. ಈ ಹಿಂದೆ 2004 ರಲ್ಲಿ ಕುಮಟಾದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ 31,273 ಮತ ಪಡೆದು ಕಾಂಗ್ರೆಸ್‌ ಅಭ್ಯರ್ಥಿ ಮೋಹನ್ ಕೆ.ಶಟ್ಟಿ ವಿರುದ್ಧ 3,465 ಮತಗಳ ಅಂತರದಿಂದ ಸೋತರೇ, 2008 ರಲ್ಲಿ ಅದೇ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ 30,201 ಮತ ಪಡೆದು ಅಂದಿನ ಜೆಡಿಎಸ್‌ ಅಭ್ಯರ್ಥಿ ದಿನಕರ್ ಶಟ್ಟಿ ವಿರುದ್ಧ 591 ಮತಗಳ ಅಂತರದಲ್ಲಿ ಸೋಲು ಕಂಡು 3ನೇ ಸ್ಥಾನದಲ್ಲಿದ್ದರು.

ಮೂರು ಸೋಲಿನ ನಂತರ ಜೆಡಿಎಸ್ ನಲ್ಲೇ ತಮ್ಮ ಅಸ್ತಿತ್ವ ಉಳಿಸಿಕೊಂಡು ಶಿರಸಿ ಕ್ಷೇತ್ರದಲ್ಲಿ ತಮ್ಮ ಹಿಡಿತ ಗಟ್ಟಿಗೊಳಿಸಿಕೊಳ್ಳುವ ಪ್ರಯತ್ನದಲ್ಲಿ ಸಾಗಿದ್ದರು. ಈ ಬಾರಿ ಮತ್ತೆ ಸ್ಪರ್ಧಿಸಲು ಅವಕಾಶ ವದಗಿಬಂದರೂ ಸ್ಫರ್ಧಿಸುವ ಮನಸ್ಸು ಮಾಡಲಿಲ್ಲ. ಈ ನಡುವೆ ಕಾಂಗ್ರೆಸ್‌ ಸಹ ಶಶಿಭೂಷಣ್ ಹೆಗಡೆ ಅವರನ್ನ ಪಕ್ಷಕ್ಕೆ ಸೆಳೆಯಲು ಕಸರತ್ತು ನಡೆಸಿತ್ತು. ಆದರೇ ಸಿಎಂ ಬಸವರಾಜ್ ಬೊಮ್ಮಾಯಿ ಪ್ರಯತ್ನದ ಫಲದಿಂದ ಕೊನೆಗೂ ಮತ್ತೆ ಶಶಿಭೂಷಣ್ ಹೆಗಡೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಗೇರಿ ಅವರಿಗೆ ಪ್ರಬಲ ಬ್ರಾಹ್ಮಣ ನಾಯಕರ ಪ್ರತಿಸ್ಪರ್ಧಿ ಇಲ್ಲದಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago