ಮಾಜಿ ಸಿಎಂ ಸದಾನಂದ ಗೌಡರ ಪತ್ರಿಕಾಗೋಷ್ಟಿ ಮುಂದೂಡಿಕೆ – vishwanews24

Featured, ರಾಜ್ಯ ನ್ಯೂಸ್

ಮಾಜಿ ಸಿಎಂ ಸದಾನಂದ ಗೌಡರ ಪತ್ರಿಕಾಗೋಷ್ಟಿ ಮುಂದೂಡಿಕೆ

ಬೆಂಗಳೂರು : ಮಾಜಿ ಸಿಎಂ, ಹಾಲಿ ಸಂಸದ ಬಿಜೆಪಿ ನಾಯಕ ಡಿ.ವಿ. ಸದಾನಂದ ಗೌಡರ ರಾಜಕೀಯ ನಡೆ ಬಗ್ಗೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಉಂಟಾಗಿದೆ. ಬಿಜೆಪಿ ತೊರೆದು, ಕಾಂಗ್ರೆಸ್‌ ಸೇರುತ್ತಾರೆ ಎಂಬ ಊಹಾಪೋಹದ ನಡುವೆ, ಅವರು ಇಂದು ಬೆಳಗ್ಗೆ ನಡೆಸಬೇಕಾಗಿದ್ದ ಸುದ್ದಿಗೋಷ್ಠಿಯನ್ನು ಸಂಜೆಗೆ ಮುಂದೂಡಲಾಗಿದೆ. ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಜೊತೆ ಚರ್ಚೆ ನಡೆಸಲಿರುವ ಹಿನ್ನಲೆಯಲ್ಲಿ ಪತ್ರಿಕಾಗೋಷ್ಟಿ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಗೌಡರ ಕಾಂಗ್ರೆಸ್ ಸೇರ್ಪಡೆ ಕುರಿತಾದ ವದಂತಿಗಳ ನಡುವೆಯೇ ಒಕ್ಕಲಿಗ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂಬ ಮಾತನ್ನೂ ಕೆಲವು ದಿನಗಳ ಹಿಂದೆ ಸದಾನಂದ ಗೌಡ ಹೇಳಿದ್ದು, ಸುದ್ದಿಗೋಷ್ಠಿಯಲ್ಲಿ ಮಹತ್ವದ ವಿಚಾರಗಳ ಬಗ್ಗೆ ಮಾತನಾಡುವ ನಿರೀಕ್ಷೆಯಿದೆ.

ಕಾಪು : ಮಾ. 26 ಮತ್ತು 27 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – Vishwanews24

ಸೋಮವಾರ ಬೆಂಗಳೂರಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಡಿ.ವಿ. ಸದಾನಂದ ಗೌಡರು ಸುದ್ದಿಗೋಷ್ಠಿ ನಡೆಸುವುದಾಗಿ ಹೇಳಿದ್ದರು. ಕಾಂಗ್ರೆಸ್ ನವರು ನನ್ನನ್ನು ಸಂಪರ್ಕ ಮಾಡಿದ್ದೂ ಹೌದು. ನನ್ನ ಮನಸ್ಸಿಗೆ ನೋವು ಆಗಿದ್ದೂ ಹೌದು. ಪಕ್ಷದ ವರಿಷ್ಠರು ಕರೆ ಮಾಡಿ ಮಾತಾಡಿದ್ದೂ ಹೌದು ನಾಳೆ (ಮಾರ್ಚ್‌ 19) ಬೆಳಗ್ಗೆ 10:30 ಮಾದ್ಯಮದ ಮುಂದೆ ಬರುತ್ತೇನೆ. ಆಗ ಎಲ್ಲವೂ ಗೊತ್ತಾಗಲಿದೆ” ಎಂದು ಸದಾನಂದ ಗೌಡರು ಈ ಹಿಂದೆ ಹೇಳಿದ್ದರು.

ಮಾರ್ಚ್ 23ರಿಂದ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

Leave a Reply