ಬೆಂಗಳೂರು : ಮಾಜಿ ಸಿಎಂ, ಹಾಲಿ ಸಂಸದ ಬಿಜೆಪಿ ನಾಯಕ ಡಿ.ವಿ. ಸದಾನಂದ ಗೌಡರ ರಾಜಕೀಯ ನಡೆ ಬಗ್ಗೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಉಂಟಾಗಿದೆ. ಬಿಜೆಪಿ ತೊರೆದು, ಕಾಂಗ್ರೆಸ್ ಸೇರುತ್ತಾರೆ ಎಂಬ ಊಹಾಪೋಹದ ನಡುವೆ, ಅವರು ಇಂದು ಬೆಳಗ್ಗೆ ನಡೆಸಬೇಕಾಗಿದ್ದ ಸುದ್ದಿಗೋಷ್ಠಿಯನ್ನು ಸಂಜೆಗೆ ಮುಂದೂಡಲಾಗಿದೆ. ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಜೊತೆ ಚರ್ಚೆ ನಡೆಸಲಿರುವ ಹಿನ್ನಲೆಯಲ್ಲಿ ಪತ್ರಿಕಾಗೋಷ್ಟಿ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಗೌಡರ ಕಾಂಗ್ರೆಸ್ ಸೇರ್ಪಡೆ ಕುರಿತಾದ ವದಂತಿಗಳ ನಡುವೆಯೇ ಒಕ್ಕಲಿಗ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂಬ ಮಾತನ್ನೂ ಕೆಲವು ದಿನಗಳ ಹಿಂದೆ ಸದಾನಂದ ಗೌಡ ಹೇಳಿದ್ದು, ಸುದ್ದಿಗೋಷ್ಠಿಯಲ್ಲಿ ಮಹತ್ವದ ವಿಚಾರಗಳ ಬಗ್ಗೆ ಮಾತನಾಡುವ ನಿರೀಕ್ಷೆಯಿದೆ.
ಸೋಮವಾರ ಬೆಂಗಳೂರಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಡಿ.ವಿ. ಸದಾನಂದ ಗೌಡರು ಸುದ್ದಿಗೋಷ್ಠಿ ನಡೆಸುವುದಾಗಿ ಹೇಳಿದ್ದರು. ಕಾಂಗ್ರೆಸ್ ನವರು ನನ್ನನ್ನು ಸಂಪರ್ಕ ಮಾಡಿದ್ದೂ ಹೌದು. ನನ್ನ ಮನಸ್ಸಿಗೆ ನೋವು ಆಗಿದ್ದೂ ಹೌದು. ಪಕ್ಷದ ವರಿಷ್ಠರು ಕರೆ ಮಾಡಿ ಮಾತಾಡಿದ್ದೂ ಹೌದು ನಾಳೆ (ಮಾರ್ಚ್ 19) ಬೆಳಗ್ಗೆ 10:30 ಮಾದ್ಯಮದ ಮುಂದೆ ಬರುತ್ತೇನೆ. ಆಗ ಎಲ್ಲವೂ ಗೊತ್ತಾಗಲಿದೆ” ಎಂದು ಸದಾನಂದ ಗೌಡರು ಈ ಹಿಂದೆ ಹೇಳಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…