ಮಾಡಲಿಂಗ್ ಮೂಲಕ ದೇಶದ ಗಮನ ಸೆಳೆದು ರಾಜ್ಯಕ್ಕೆ ಕೀರ್ತಿ ತಂದ ಕಲಬುರಗಿಯ ಅನನ್ಯ ರೈ -Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ಕಲಬುರಗಿ:  ಕಲಬುರಗಿಯ ಬಾಲಕಿ ಮಾಡಲಿಂಗ್ ಮೂಲಕ ದೇಶದ ಗಮನ ಸೆಳೆದಿದ್ದು, ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.ಹಾಂಕಾಂಗ್‍ನಲ್ಲಿ ಇತ್ತೀಚೆಗೆ ನಡೆದ ಜೂನಿಯರ್ ಇಂಟರ್ ನ್ಯಾಷನಲ್ ಮಾಡೆಲ್ ಸ್ಪರ್ಧೆಯಲ್ಲಿ, ಕಲಬುರಗಿಯ ಅನನ್ಯ ರೈ ಚಿನ್ನದ ಪದಕ ಗಳಿಸಿದ್ದಾಳೆ.

ಭಾರತದ ಪರ ಜೂನಿಯರ್ ಮಾಡೆಲಿಂಗ್‍ನಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಿಂದ ಆಯ್ಕೆಯಾದ ಮಾಡೆಲ್ ಅನನ್ಯ ಆಗಿದ್ದಾಳೆ. ದೇಶದಲ್ಲಿ ಮಿಂಚಿದ್ದ ಅನನ್ಯ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಪ್ರತಿಭೆಯನ್ನು ಅನಾವರಣಗೊಳಿಸಿ, ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾಳೆ.

ಹೈದರಾಬಾದ್‍ನ ಚೈತನ್ಯ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅನನ್ಯ 9ನೇ ತರಗತಿ ಓದುತ್ತಿದ್ದಾಳೆ.  ಅನನ್ಯ ತಮ್ಮ ತಂದೆ-ತಾಯಿಯ ಏಕೈಕ ಪುತ್ರಿ. ಅನನ್ಯಳ ತಂದೆ ಹೋಟೆಲ್ ಉದ್ಯಮಿ ಆಗಿದ್ದು, ತಾಯಿ ರೂಪಾಕ್ಷಿ ಅವರು ಕಲಬುರಗಿಯ ಜೆಸ್ಕಾಂ ಇಲಾಖೆಯಲ್ಲಿ ಜೆಇ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.