ರಾಜ್ಯ ನ್ಯೂಸ್

ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ವರಿಸಿದ ಪದವೀಧರ ಯುವತಿ – Vishwanews24

ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ವರಿಸಿದ ಪದವೀಧರ ಯುವತಿ – Vishwanews24

ನರಗುಂದ : ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ಪದವೀಧರ ಯುವತಿ ವರಿಸಿದ್ದಾರೆ.

ನರಗುಂದ ಪಟ್ಟಣದ ದಂಡಾಪುರ ಬಡಾವಣೆಯ ಲಾಲಮಹಮ್ಮದ್, ಆರೀಫಾಭಾನು ದಂಪತಿ ಪುತ್ರ ಮಹಮ್ಮದ್ ಸಾಧಿಕ್ ಹಾಗೂ ಗದುಗಿನ ಗಂಗಿಮಡಿ ಬಡಾವಣೆಯ ಮಲೀಕಸಾಬ್-ಮಮತಾಜ್‌ಬೇಗಂ ಪಲ್ಲೇದ ದಂಪತಿ ಪುತ್ರಿ ಸುಮಯ್ಯಾ ಭಾನುವಾರ ನವಜೀವನಕ್ಕೆ ಕಾಲಿಟ್ಟರು. ಸೋಮವಾರ ಪಟ್ಟಣದಲ್ಲಿ ವಲೀಮಾ ನಡೆಯಿತು.

ನರಗುಂದದ ನಿವಾಸಿ ವರ ಮಹಮ್ಮದ್ ಸಾಧಿಕ್ ನರೇಗಲ್‌ನ ಶ್ರೀಅನ್ನದಾನೇಶ್ವರ ಕಿವುಡ ಮತ್ತು ಮೂಕರ ಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣವನ್ನು ಪೊರೈಸಿದ್ದಾರೆ. ನಂತರ ಮೈಸೂರಿನ ಜೆಎಸ್‍ಎಸ್ ಕಾಲೇಜ್‍ನಲ್ಲಿ ಪಿಯುಸಿ ಓದಿ,  ಆಟೋ ಇಲೆಕ್ಟ್ರೀಷಿಯನ್ ಆಗಿ ಸ್ವಂತ ಉದ್ಯೋಗದಲ್ಲಿದ್ದಾರೆ. ವರನಿಗೆ ದೂರದ ಸಂಬಂಧಿ ಆಗಿರುವ ವಧು ಸುಮಯ್ಯಾ ನರಗುಂದದ ಶಾರದಾಂಬಾ ಶಾಲೆಯಲ್ಲಿ 1 ರಿಂದ 10ನೇ ತರಗತಿ ಓದಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎರಡು ವರ್ಷ ಕಲಾ ಶಿಕ್ಷಣ ಪಡೆದಿದ್ದಾರೆ. ಬಳಿಕ ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ.

‘ದೇವರ ಸದಿಚ್ಛೆಯಂತೆ ನಮ್ಮ ಮಗಳಿಗೆ ವರ ಸಿಕ್ಕಿದ್ದಾನೆ. ಗುರು, ಹಿರಿಯರ ಆಶೀರ್ವಾದದಿಂದ ಸಮಾಜಕ್ಕೆ ಮಾದರಿಯಾಗುವಂತೆ ಇವರಿಬ್ಬರೂ ಸುಂದರವಾದ ಜೀವನವನ್ನು ನಡೆಸಲಿ’ ಎಂದು ವಧುವಿನ ತಂದೆ ಮಲೀಕಸಾಬ್‌ ಪಲ್ಲೇದ ಹಾರೈಸಿದರು.

 

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago