ಕೋಲಾರ: ಪತಿಯ ಕುಟುಂಬಸ್ಥರಿಂದ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಮಾಲೂರು ತಾಲೂಕಿನ ಕಾಡದೇನಹಳ್ಳಿಯಲ್ಲಿ ನಡೆದಿದೆ.
ರಶ್ಮಿ(25) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ರಶ್ಮಿ, ಪತಿ ಮನೆಯಲ್ಲೇ ಡೆತ್‌ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿನೇಶ್ ಹಾಗೂ ರಶ್ಮಿ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. 1 ವರ್ಷದ ಹಿಂದೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು.
ರಶ್ಮಿ ಡೆತ್‌ನೋಟ್‌ನಲ್ಲಿ ʻರೀ ಸಾರಿ ನಿಮ್ಮ ಅಮ್ಮ, ದೊಡ್ಡಮ್ಮನ ಕಾಟ ತಡೆಯೋಕೆ ಆಗುತ್ತಿಲ್ಲ. ಮದುವೆಯಾಗಿ ಬಂದಾಗಿನಿಂದ ನೆಮ್ಮದಿಯೇ ಇಲ್ಲ. ನನ್ನಿಂದ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ನನ್ನ ಗಂಡ ಒಳ್ಳೆಯವನೇ, ಆದರೆ ಮನೆಯವರು ಒಳ್ಳೆಯವರಲ್ಲ. ಅದಕ್ಕೆ ನೀವು ಬರುವಷ್ಟರಲ್ಲೇ ಸಾಯುತ್ತಿದ್ದೇನೆ, ಬೈʼ ಎಂದು ಬರೆದಿದ್ದಾರೆ.
ಇತ್ತ ತಂದೆ ತಾಯಿಗೂ ಸಾರಿ ಕೇಳಿರುವ ರಶ್ಮಿ, ಅಮ್ಮ ಇಷ್ಟು ದಿನ ಇಲ್ಲಿನ ಕಷ್ಟ ಸಹಿಸಿಕೊಂಡೆ. ಇಲ್ಲಿಯವರು ಒಳ್ಳೆಯವರಲ್ಲ. ವರದಕ್ಷಿಣೆ ತಂದಿಲ್ಲ ಎಂದು ಹೊಡೆಯುತ್ತಾರೆ ಎಂದು ಬರೆದು ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ 3 ತಿಂಗಳ ಹಿಂದೆ ರಶ್ಮಿಗೆ ಗರ್ಭಪಾತವಾಗಿದ್ದು, ವರದಕ್ಷಿಣೆ ನೀಡಿಲ್ಲ. ಮಗು ಆಗಿಲ್ಲ ಎಂದು ಮಾನಸಿಕ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ.
ಪ್ರಕರಣದ ಆರೋಪಿಗಳಾದ ಪತಿ ದಿನೇಶ್ ಗೌಡ, ಮಾವ ಅಪ್ಪಾಜಿ ಗೌಡ, ಅತ್ತೆ ಸರೋಜಮ್ಮ, ದೊಡ್ಡತ್ತೆ ರತ್ನಮ್ಮರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…