Featured

ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ – vishwanews24

ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳ : ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ

ಕೋಲಾರ: ಪತಿಯ ಕುಟುಂಬಸ್ಥರಿಂದ ಮಾನಸಿಕ ಹಾಗೂ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ  ಮಾಲೂರು ತಾಲೂಕಿನ ಕಾಡದೇನಹಳ್ಳಿಯಲ್ಲಿ ನಡೆದಿದೆ.

ರಶ್ಮಿ(25) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ರಶ್ಮಿ, ಪತಿ ಮನೆಯಲ್ಲೇ ಡೆತ್‌ನೋಟ್‌ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿನೇಶ್ ಹಾಗೂ ರಶ್ಮಿ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. 1 ವರ್ಷದ ಹಿಂದೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು.

ರಶ್ಮಿ ಡೆತ್‌ನೋಟ್‌ನಲ್ಲಿ ʻರೀ ಸಾರಿ ನಿಮ್ಮ ಅಮ್ಮ, ದೊಡ್ಡಮ್ಮನ ಕಾಟ ತಡೆಯೋಕೆ ಆಗುತ್ತಿಲ್ಲ. ಮದುವೆಯಾಗಿ ಬಂದಾಗಿನಿಂದ ನೆಮ್ಮದಿಯೇ ಇಲ್ಲ. ನನ್ನಿಂದ ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ನನ್ನ ಗಂಡ ಒಳ್ಳೆಯವನೇ, ಆದರೆ ಮನೆಯವರು ಒಳ್ಳೆಯವರಲ್ಲ. ಅದಕ್ಕೆ ನೀವು ಬರುವಷ್ಟರಲ್ಲೇ ಸಾಯುತ್ತಿದ್ದೇನೆ, ಬೈʼ ಎಂದು ಬರೆದಿದ್ದಾರೆ.

ಇತ್ತ ತಂದೆ ತಾಯಿಗೂ ಸಾರಿ ಕೇಳಿರುವ ರಶ್ಮಿ, ಅಮ್ಮ ಇಷ್ಟು ದಿನ ಇಲ್ಲಿನ ಕಷ್ಟ ಸಹಿಸಿಕೊಂಡೆ. ಇಲ್ಲಿಯವರು ಒಳ್ಳೆಯವರಲ್ಲ. ವರದಕ್ಷಿಣೆ ತಂದಿಲ್ಲ ಎಂದು ಹೊಡೆಯುತ್ತಾರೆ ಎಂದು ಬರೆದು ಪತಿ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ 3 ತಿಂಗಳ ಹಿಂದೆ ರಶ್ಮಿಗೆ ಗರ್ಭಪಾತವಾಗಿದ್ದು, ವರದಕ್ಷಿಣೆ ನೀಡಿಲ್ಲ. ಮಗು ಆಗಿಲ್ಲ ಎಂದು ಮಾನಸಿಕ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ.

ಪ್ರಕರಣದ ಆರೋಪಿಗಳಾದ ಪತಿ ದಿನೇಶ್ ಗೌಡ, ಮಾವ ಅಪ್ಪಾಜಿ ಗೌಡ, ಅತ್ತೆ ಸರೋಜಮ್ಮ, ದೊಡ್ಡತ್ತೆ ರತ್ನಮ್ಮರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

19 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago