ಹಾಸನ:ಚನ್ನರಾಯಪಟ್ಟಣ ತಾಲ್ಲೂಕು ಯಲಿಯೂರಿನ ದೇವೀರಮ್ಮ ಹಾಗೂ ಬೇಲೂರಿನ ಚನ್ನಕೇಶವ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಗೌಡರು, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲರೂ ಸೇರಿ ಪ್ರಜ್ವಲ್ ನನ್ನು ಗೆಲ್ಲಿಸಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮನವಿ ಮಾಡಿದರು.
‘ದೇಶದಲ್ಲಿ ಮೋದಿ ಬಿಟ್ಟರೆ ಬೇರೆ ಯಾರೊಬ್ಬರೂ ಪ್ರಧಾನಿ ಆಗೋರು ಇಲ್ಲವೇ ಎಂದು ಪ್ರಶ್ನಿಸಿದ ಗೌಡರು, ಬೆಂಗಳೂರಿನಲ್ಲಿ ಬಿಜೆಪಿ ಮೂರು ಸ್ಥಾನ ಗೆಲ್ಲಲು ಬಿಡುವುದಿಲ್ಲ’ ಎಂದು ಶಪಥ ಮಾಡಿದರು.
‘ನಾನು-ಸಿದ್ದರಾಮಯ್ಯ ಸೇರಿ ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ಬಿಜೆಪಿ ಬಲ ಕುಗ್ಗಿಸಲು ಹೋರಾಟ ಮಾಡುವುದಾಗಿ’ ಎಚ್ಚರಿಕೆ ನೀಡಿದರು.
ಹೋದ ಕಡೆ, ಬಂದ ಕಡೆಯೆಲ್ಲಾ ಕಾಂಗ್ರೆಸ್ ಪಕ್ಷ ತೊಲಗಿಸುವ ಮಾತುಗಳನ್ನಾಡುತ್ತಿದ್ದಾರೆ’ ಎಂದು ಗುಡುಗಿದರು.ಮಾಧ್ಯಮಗಳೂ ಕೂಡ, ಮೋದಿ ಬಿಟ್ಟರೆ ಬೇರೆ ಯಾರೂ ದೇಶ ಆಳರು ಎಂಬಂತೆ ಬಿಂಬಿಸುತ್ತಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದರು.
ಮಾಯವತಿಗೆ, ಚಂದ್ರಬಾಬು ನಾಯ್ಡು, ಮಮತಾ ಬ್ಯಾನರ್ಜಿ ಹಾಗೂ ರಾಹುಲ್ ಗಾಂಧಿಗೆ ಈ ದೇಶ ಆಳುವ ಸಾಮರ್ಥ್ಯ ಇಲ್ಲವೇ ಎಂದು ಪ್ರಶ್ನಿಸಿದರು.
‘ನಾನೇ ಎಲ್ಲಾ ಎನ್ನುತ್ತಿದ್ದ ಮೋದಿ ಅವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೂರು ರಾಜ್ಯಗಳು ಕೈ ತಪ್ಪಿದ ನಂತರ ಐಟಿ, ಇಡಿ ದಾಳಿ ಮೂಲಕ ಸಣ್ಣ ಸಣ್ಣ ಪಕ್ಷಗಳನ್ನು ಮುಗಿಸಲು ಹೊರಟಿದ್ದಾರೆ’ ಎಂದು ಮೋದಿ ಕಾರ್ಯವೈಖರಿ ಯನ್ನು ಟೀಕಿಸಿದರು.
‘ಮತ್ತೊಮ್ಮೆ ಪ್ರಧಾನಿಯಾಗೋದು ಸೇರಿದಂತೆ ನನಗೆ ಯಾವುದೇ ಅಧಿಕಾರ ವ್ಯಾಮೋಹ ಇಲ್ಲ. ನಾನು, ಸಿದ್ದರಾಮಯ್ಯ ಒಟ್ಟಾಗಿ ಸೇರಿ ಮಂಡ್ಯ, ಮೈಸೂರು ಸೇರಿ ಎಲ್ಲೆಡೆ ಪ್ರಚಾರ ಮಾಡುತ್ತೇವೆ. ಬಿಜೆಪಿಯನ್ನು ಸಂಪೂರ್ಣ ತೆಗೆಯುತ್ತೇವೆ ಎಂದು ಹೇಳಲ್ಲ. ಆದರೆ, ಇರುವ ಸ್ಥಾನ ಖಂಡಿತಾ ಕಡಿಮೆ ಮಾಡುತ್ತೇವೆ’ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…