ಹಾಸನ: ಹಾಸನದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ. ಹಾಸನ ತಾಲೂಕಿನ ದುದ್ದ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಕೊಲೆಯಾದ ವ್ಯಕ್ತಿಯಾಗಿದ್ದಾರೆ, ಹರೀಶ್ ಅವರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿದ್ದರು. ಇದೇ ನವೆಂಬರ್ 11 ಕ್ಕೆ ಹರೀಶ್ ಅವರ ವಿವಾಹ ಕೂಡ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ವಿವಾಹ ಆಮಂತ್ರಣ ಪತ್ರಿಕೆಗಳನ್ನು ಸಂಬಂಧಿಕರಿಗೆ ಹಂಚಿ ರಾತ್ರಿ ಮನೆಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಡಾಬಾ ಸರ್ಕಲ್‌ನಲ್ಲಿ ಈ ಕೃತ್ಯ ಎಸಗಲಾಗಿದೆ. ದುಷ್ಕರ್ಮಿಗಳು ಅವರ ಬೈಕಿನ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…