ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಜ.15 ರಿಂದ ಜ.17 ರ ವರೆಗೆ ಮಕರ ಸಂಕ್ರಮಣ ಉತ್ಸವ -Vishwanews24

ಮಾರಣಕಟ್ಟೆ,:ಉಡುಪಿ,ಕುಂದಾಪುರ ಹಾಗೂ ಬೈಂದೂರು ತಾಲೂಕುಗಳ ಆರಾಧ್ಯ ದೇವವಾಗಿರುವ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿ ಜ.15 ರಿಂದ ಜ.17 ರ ತನಕ ಮಕರಸಂಕ್ರಮಣ ಉತ್ಸವ ಜರಗಲಿದೆ.

ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರು ಕಟ್ಟುನಿಟ್ಟಾಗಿ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸದೆ ಬಟ್ಟೆ ಅಥವಾ ಕಾಗದದ ಚೀಲ ಬಳಸುವಂತೆ ಸೂಚಿಸಲಾಗಿದ್ದು ಪ್ಲಾಸ್ಟಿಕ್‌ ಮುಕ್ತ ಮಕರಸಂಕ್ರಮಣ ಉತ್ಸವ ನಡೆಸಲು ಸಕಲ ಸಿದ್ಧತೆ ಪೂರ್ಣಗೊಂಡಿದೆ ಎಂದು ದೇಗುಲದ ಆಡಳಿತ
ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಹಾಗೂ ಮಂಡಳಿಯ ಪ್ರಮುಖ ಸಿ.ರಘುರಾಮ ಶೆಟ್ಟಿ ತಿಳಿಸಿದ್ದಾರೆ.

ಹಲವಾರು ವರ್ಷಗಳ ಅನಂತರ ಈ ಬಾರಿ ಜ. 14ರ ಬದಲು ಜ.15ರಂದು ಸಂಕ್ರಮಣ ಉತ್ಸವ ಆರಂಭಗೊಳಲಿದ್ದು ಅದಕ್ಕಾಗಿ ದೇಗುಲ ಪರಿಸರದಲ್ಲಿ ಅಂಗಡಿ ಮುಂಗಟ್ಟುಗಳ ಸಹಿತ ರಥಬೀದಿಯನ್ನು ಸುಂದರವಾಗಿ ಅಲಂಕರಿಸಲಾಗುತ್ತಿದೆ. ಮಕರ ಸಂಕ್ರಮಣ ಸಂದರ್ಭ ನಡೆಯುವ ಸೇವಂತಿಗೆ ಹೂವಿನ ಹೊರೆ ಕಾಣಿಕೆ ಮಹತ್ವದ್ದಾಗಿದ್ದು ಇದಕ್ಕಾಗಿ ಸರತಿಯ ಸಾಲಿನಲ್ಲಿ ಸಾಗಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ .

ಕ್ಷೇತ್ರದ ವಿಶೇಷ ಉತ್ಸವಗಳು
ಮಾರಣಕಟ್ಟೆ ಮಕರ ಸಂಕ್ರಾಂತಿಯು ಬಹುದೊಡ್ಡ ಜಾತ್ರೆ. ಮೂರು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ತುಳುನಾಡಿನಿಂದ ಅಸಂಖ್ಯಾಕ ಭಕ್ತರು ಆಗಮಿಸುತ್ತಾರೆ. ಬ್ರಹ್ಮಲಿಂಗೇಶ್ವರನಿಗೆ ಪ್ರಿಯವಾದ ಸಿಂಗಾರ ಹೂವಿನ ಅರ್ಪಣೆ ವಿಶೇಷವಾಗಿದೆ. ಕುಂಭ ಸಂಕ್ರಮಣ ಇಲ್ಲಿನ ಇನ್ನೊಂದು ವಿಶೇಷ ಜಾತ್ರೆ. ಅದಲ್ಲದೆ ವರ್ಷದ ಮೂರು ಕಾಲದಲ್ಲಿ ಚೆರುವಿನ ಪೂಜೆ, ಸಂಪ್ರೋಕ್ಷಣೆ, ಸೌರಮಾನ ಯುಗಾದಿ, ಸೋಣೆ ಆರತಿ, ಕದಿರು ಕಟ್ಟುವುದು, ದೀಪೋತ್ಸವ ಇವು ಇಲ್ಲಿನ ಇನ್ನಿತರ ವಿಶೇಷ ಪೂಜೆಗಳು.

ಸಂಕ್ರಾಂತಿ ಪೂಜಾ ವಿಶೇಷತೆ
ಜ.15 ರಂದು ಮಧ್ಯಾಹ್ನ12 ಗಂಟೆಗೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಮಹಾಮಂಗಳಾರತಿ ಹಾಗೂ ರಾತ್ರಿ 10. 30ಕ್ಕೆ ಗೆಂಡ ಸೇವೆ . ಜ.16 ರಂದು ಬೆಳಗ್ಗೆ 9.30ಕ್ಕೆ ಮಹಾ ಮಂಗಳಾರತಿ , ಅನಂತರ ಮಂಡಲ ಸೇವೆ. ಜ.17ರಂದು ಬೆಳಗ್ಗೆ 9.30 ಕ್ಕೆ ಮಹಾಮಂಗಳಾರತಿ , ಅನಂತರ ಮಂಡಲ ಸೇವೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago