Featured

ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ರಾಜ್ಯ ಸರ್ಕಾರ ಮಹತ್ವದ ಆದೇಶ – vishwanews24

ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ಕರ್ನಾಟಕ ಆರೋಗ್ಯ ಇಲಾಖೆ ಮಹತ್ವದ ಆದೇಶ

ಬೆಂಗಳೂರು:ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ.

ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ. ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.ಇದೀಗ ಮಾರಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು ನೀಡುವ ಮೂಲಕ ಕರ್ನಾಟಕ ಆರೋಗ್ಯ ಇಲಾಖೆ ಸುಪ್ರೀಂ ಕೋರ್ಟ್​​ನ ನಿರ್ದೇಶನ ಜಾರಿ ಮಾಡಿದಂತಾಗಿದೆ.

ಗಂಭೀರವಾದ ಮತ್ತು ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರ ಕುಟುಂಬಸ್ಥರ ಮನವಿ ಮೇರೆಗೆ ವೈದ್ಯರ ತಂಡ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ಎರಡು ಪ್ರೈಮರಿ ಹಾಗೂ ಸೆಕೆಂಡರಿ ಎಂಬ ಎರಡು ವೈದ್ಯರ ಬೋರ್ಡ್​​ಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರೈಮರಿ ಬೋರ್ಡ್​​ನಲ್ಲಿ ಮೂವರು ವೈದ್ಯರು ಇರುತ್ತಾರೆ. ಸೆಕೆಂಡರಿ ಬೋರ್ಡ್​​ನಲ್ಲಿ ಕೂಡ ಮೂವರು ವೈದ್ಯರು ಇರಲಿದ್ದಾರೆ. ಈ ಪೈಕಿ ಒಬ್ಬರು ಸರ್ಕಾರಿ ವೈದ್ಯರು ಇರುತ್ತಾರೆ.

ರೋಗಿಯ ಕುಟುಂಬಸ್ಥರು ಮಾಡಿದ ಮನವಿಯನ್ನು ಮೊದಲು ಪ್ರೈಮರಿ ಬೋರ್ಡ್ ಪರಿಶೀಲನೆ ನಡೆಸಿ ವರದಿ ನೀಡುತ್ತದೆ. ಆ ವರದಿಯನ್ನು ಸೆಕೆಂಡರಿ ಬೋರ್ಡ್ ಪರಿಶೀಲನೆ ನಡೆಸುತ್ತದೆ. ಬಳಿಕ ಕೋರ್ಟ್​​ಗೆ ವರದಿಯ ಪ್ರತಿ ನೀಡಲಾಗುತ್ತದೆ. ಕೋರ್ಟ್ ಅನುಮತಿ ನೀಡಿದ ಬಳಿಕ ರೋಗಿಯ ಲೈಫ್ ಸಪೋರ್ಟ್ ಸಿಸ್ಟಮ್ ಅನ್ನು ವೈದ್ಯರು ತೆಗೆಯಲಾಗುತ್ತದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago