ಮಾರಣಾಂತಿಕ ದಾಳಿ ನಡೆಸುವ 23 ತಳಿಯ ಶ್ವಾನಗಳ ನಿಷೇಧಕ್ಕೆ ಕೇಂದ್ರ ಆದೇಶ – vishwanews24

Featured, ರಾಷ್ಟ್ರ ನ್ಯೂಸ್

ಮಾರಣಾಂತಿಕ ದಾಳಿ ನಡೆಸುವ 23 ತಳಿಯ ಶ್ವಾನಗಳ ನಿಷೇಧಕ್ಕೆ ಕೇಂದ್ರ ಆದೇಶ

ನವದೆಹಲಿ : ಮಾರಣಾಂತಿಕ ದಾಳಿ ನಡೆಸುವ ಪಿಟ್‍ಬುಲ್, ಅಮೆರಿಕನ್ ಬುಲ್‍ಡಾಗ್ ರಾಟ್‍ವೀಲರ್ ಸೇರಿದಂತೆ 23 ನಾಯಿ ತಳಿಗಳನ್ನು ಅಪಾಯಕಾರಿ ಎಂದು ಕೇಂದ್ರ ಸರ್ಕಾರ ಗುರುತಿಸಿದೆ.

ಈ ವಿದೇಶಿ ನಾಯಿ ತಳಿಗಳ ಸಂತಾನೋತ್ಪತ್ತಿ, ಸಾಕುವುದು, ಮಾರಾಟ ಮಾಡುವುದನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳಿಗೂ ಕೇಂದ್ರ ನಿರ್ದೇಶನ ನೀಡಿದೆ.

ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನ ; ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ – vishwanews24

ಕೇಂದ್ರ ಪಶುಸಂಗೋಪನೆ ಇಲಾಖೆಯ ಜಂಟಿ ಕಾರ್ಯದರ್ಶಿ ಓ.ಪಿ ಚೌಧರಿ ಅವರು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈ ಬಗ್ಗೆ ಆದೇಶ ರವಾನಿಸಿದ್ದಾರೆ. ಆದೇಶದಲ್ಲಿ ಜನರ ಜೀವಕ್ಕೆ ಅಪಾಯ ತಂದೊಡ್ಡುವ ಪಿಟ್‍ಬುಲ್, ಅಮೆರಿಕನ್ ಬುಲ್‍ಡಾಗ್ ಸೇರಿ ವಿವಿಧ ತಳಿಯ ವಿದೇಶಿ ನಾಯಿಗಳನ್ನು ಸಾಕಲು ಅನುಮತಿ ನೀಡದಂತೆ ಇಲಾಖೆ ಸೂಚಿಸಿದೆ.

ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನ ; ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ – vishwanews24

ಜೊತೆಗೆ ಅಂತಹ ತಳಿಗಳ ನಾಯಿಗಳನ್ನು ಆಮದು ಮಾಡಿಕೊಳ್ಳುವುದಕ್ಕೂ ನಿಷೇಧ ಹೇರಲಾಗಿದೆ. ಈಗ ಗುರುತಿಸಿರುವ ನಾಯಿಗಳನ್ನು ವಿವಿಧ ಸ್ಪರ್ಧೆಗೆ ಬಳಸುವುದನ್ನೂ ನಿಷೇಧಿಸಬೇಕು ಎಂದು ಪ್ರಾಣಿ ದಯಾ ಸಂಘ (ಪೆಟಾ) ಮನವಿ ಸಲ್ಲಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರಕ್ಕೆ ಬಂದಿದೆ.

ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನ ; ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆ – vishwanews24

Leave a Reply