Featured

ಮಾರ್ಚ್ 1ರಿಂದ ಮಂಗಳೂರು-ಮಸ್ಕತ್ ನಡುವೆ ನೇರ ವಿಮಾನಯಾನ ಸೇವೆ ಪುನರಾರಂಭ: ಸಂಸದ ಕ್ಯಾ. ಚೌಟ – vishwanews24

ಮಾರ್ಚ್ 1ರಿಂದ ಮಂಗಳೂರು-ಮಸ್ಕತ್ ನಡುವೆ ನೇರ ವಿಮಾನಯಾನ ಸೇವೆ ಪುನರಾರಂಭ: ಸಂಸದ ಕ್ಯಾ. ಚೌಟ

ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಹಾಗೂ ನೆರೆಯ ಕೇರಳ ರಾಜ್ಯದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ ಬಹುಕಾಲದ ಬೇಡಿಕೆಯಂತೆ ಮಂಗಳೂರು ಮತ್ತು ಮಸ್ಕತ್ ನಡುವಿನ ನೇರ ವಿಮಾನಯಾನ ಸೇವೆಯು ಮಾರ್ಚ್ 1 ರಿಂದ ಅಧಿಕೃತವಾಗಿ ಪುನರಾರಂಭಗೊಳ್ಳಲಿದೆ.

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವತಿಯಿಂದ ಈ ವಿಮಾನ ಹಾರಾಟ ನಡೆಯಲಿದ್ದು, ಕರಾವಳಿ ಭಾಗದಿಂದ ಹೆಚ್ಚಿನ ಸಂಖ್ಯೆಯ ಜನರು ಉದ್ಯೋಗ ಮತ್ತು ವ್ಯಾಪಾರ ನಿಮಿತ್ತ ಮಸ್ಕತ್‌ಗೆ ಪ್ರಯಾಣಿಸುತ್ತಿರುವ ಹಿನ್ನೆಲೆಯಲ್ಲಿ ಈ ಸೇವೆಗೆ ಹೆಚ್ಚಿನ ಒತ್ತಾಯ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ವ್ಯವಹಾರ ನಡೆಸಿ, ವಿಮಾನಯಾನ ಪುನಾರಂಭಿಸುವಂತೆ ಮನವಿ ಸಲ್ಲಿಸಿದ್ದರು.

ಸದ್ಯದ ವೇಳಾಪಟ್ಟಿಯ ಪ್ರಕಾರ, ವಾರದಲ್ಲಿ ಎರಡು ದಿನ ಅಂದರೆ ಪ್ರತಿ ಭಾನುವಾರ ಮತ್ತು ಮಂಗಳವಾರ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಹಾರಾಟ ನಡೆಸಲಿದೆ. ಈ ನೇರ ಸೇವೆಯಿಂದಾಗಿ ಪ್ರಯಾಣದ ಸಮಯ ಉಳಿತಾಯವಾಗುವುದಲ್ಲದೆ, ಅನಿವಾಸಿ ಭಾರತೀಯರಿಗೆ ತಮ್ಮ ಊರುಗಳಿಗೆ ನೇರವಾಗಿ ಪ್ರಯಾಣಿಸಲು ಬಹಳಷ್ಟು ಅನುಕೂಲವಾಗಲಿದೆ.

ಇದನ್ನೂ ಓದಿ:

ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ “ಮಂಗಳೂರು-ಮಸ್ಕತ್ ನೇರ ವಿಮಾನಯಾನ ಸೇವೆಯು ಅಚಾನಕ್ ಆಗಿ ಸ್ಥಗಿತಗೊಂಡ ಕಾರಣ ಮಸ್ಕತ್‌ನಲ್ಲಿ ನೆಲೆಸಿರುವ ನಮ್ಮ ಕರಾವಳಿ ಭಾಗದ ಸಾವಿರಾರು ಪ್ರಯಾಣಿಕರಿಗೆ ತೀವ್ರ ಸಂಕಷ್ಟ ಎದುರಾಗಿತ್ತು. ಮಸ್ಕತ್‌ನಿಂದ ಮಂಗಳೂರಿಗೆ ಬರಬೇಕಾದವರು ದೆಹಲಿ, ಮುಂಬೈ ಅಥವಾ ಕಣ್ಣೂರು ಮೂಲಕ ಸುತ್ತಿ ಬಳಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಇತ್ತು. ಈ ಗಂಭೀರ ಸಮಸ್ಯೆಯನ್ನು ಮನಗಂಡು ನಾವು ನಡೆಸಿದ ನಿರಂತರ ಪ್ರಯತ್ನ ಹಾಗೂ ಮನವಿಗೆ ಸ್ಪಂದಿಸಿ, ಮಾರ್ಚ್ 1 ರಿಂದ ಈ ಸೇವೆಯನ್ನು ಪುನರಾರಂಭಿಸಲು ಕ್ರಮ ಕೈಗೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರಿಗೆ ಸಮಸ್ತ ಅನಿವಾಸಿ ಕರಾವಳಿಗರ ಪರವಾಗಿ ನಾನು ಹೃತ್ಪೂರ್ವಕ ಧನ್ಯವಾದ ಅರ್ಪಿಸುತ್ತೇನೆ. ಈ ನೇರ ವಿಮಾನ ಸೇವೆಯು ನಮ್ಮ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮಾಡಿಕೊಡಲಿದೆ” ಎಂದು ಹೇಳಿದ್ದಾರೆ.

Vishwa News 24

Recent Posts

ಕಾಪು ಹೊಸ ಮಾರಿಗುಡಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಭೇಟಿ : ವಿಶ್ವ ನ್ಯೂಸ್24

**ಕಾಪು ಹೊಸ ಮಾರಿಗುಡಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕುಟುಂಬ ಸಮೇತ ಭೇಟಿ** ಕಾಪು: ಕೇಂದ್ರ ಉಕ್ಕು ಮತ್ತು ಬೃಹತ್…

12 hours ago

ಮತಾಂತರ ನಿಷೇಧ, ಗೋಹತ್ಯೆ ಪ್ರತಿಬಂಧಕ ಕಾಯ್ದೆ ವಾಪಸು ಪಡೆದರೆ ರಾಜ್ಯಾದ್ಯಂತ ಬೃಹತ್ ಜನಾಂದೋಲನ: ವಿಹಿಂಪ ಎಚ್ಚರಿಕೆ – vishwanews24

ಮತಾಂತರ ನಿಷೇಧ, ಗೋಹತ್ಯೆ ಪ್ರತಿಬಂಧಕ ಕಾಯ್ದೆ ವಾಪಸು ಪಡೆದರೆ ರಾಜ್ಯಾದ್ಯಂತ ಬೃಹತ್ ಜನಾಂದೋಲನ: ವಿಹಿಂಪ ಎಚ್ಚರಿಕೆ ಉಡುಪಿ: ರಾಜ್ಯ ಸರ್ಕಾರವು…

12 hours ago

ನೆಹರು ದೇಶದ ಅಭಿವೃದ್ಧಿಗೆ ಭದ್ರವಾದ ಅಡಿಪಾಯ ಹಾಕಿದ ಮಹಾನ್ ನಾಯಕ : ಸಿದ್ದರಾಮಯ್ಯ – vishwanews24

ದೇಶದ ಅಭಿವೃದ್ಧಿಗೆ ನೆಹರು ಹಾಕಿದ ಅಡಿಪಾಯ ಮರೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ ಬೆಂಗಳೂರು : ಸ್ವತಂತ್ರ ಭಾರತದ ಮೊದಲ ಪ್ರಧಾನಮಂತ್ರಿ ಪಂಡಿತ್…

2 days ago

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  – vishwanews24

ಉಡುಪಿ:  ತಾಯಿಯ ಮೃತದೇಹದ ಎದುರು ಕಣ್ಣೀರಿಟ್ಟ ರವಿ ಪೂಜಾರಿ  ಉಡುಪಿ: ಭೂಗತ ಪಾತಕಿ ರವಿ ಪೂಜಾರಿ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು…

2 days ago

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ – vishwanews24

ಕಾಪು: ಗೃಹಲಕ್ಷ್ಮಿ ಕೆವೈಸಿ ಹೆಸರಿನಲ್ಲಿ ಸಮಾವೇಶಕ್ಕೆ ಜನರ ಆಹ್ವಾನ : ಬಿಜೆಪಿ ಆರೋಪ ಕಾಪು : ಗ್ರಾಮೀಣ ಕಾಂಗ್ರೆಸ್ ಸಮಿತಿಯ…

2 days ago

ಉಡುಪಿಯಲ್ಲಿ 28ರಿಂದ 30ರವರೆಗೆ ಮೂರು ದಿನಗಳ ಕಾಲ ಶ್ರೀ ಶಂಕರ ವಿಜಯೋತ್ಸವ – vishwanews24

ಶಂಕರಾಚಾರ್ಯರಿಂದ ದೇಶಾದ್ಯಂತ ಧರ್ಮಜಾಗೃತಿ : ವಾಗೀಶ್ ಶಾಸ್ತ್ರಿ 2.85 ಕೋಟಿ ವೆಚ್ಚ, ಲಕ್ಷಕ್ಕೂ ಅಧಿಕ ಅಧಿಕ ಭಕ್ತರ ಸೇರುವ ನಿರೀಕ್ಷೆ…

2 days ago