ಮಹಾಲಕ್ಷ್ಮೀ ಕೋ ಆಪರೇಟಿವ ಬ್ಯಾಂಕ್ ಲಿ. ಉಡುಪಿ ಇದರ ಗಾಹಕರ ಸಮಾವೇಶ ಮಾರ್ಚ್ ೧೯ ರಂದು ಮಧ್ಯಾಹ್ನ ೩ ಗಂಟೆಗೆ ಉಡುಪಿ ಕಿದಿಯೂರು ಹೋಟೆಲ್‌ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.
ಗ್ರಾಹಕರ ಸಮಾವೇಶವನ್ನು ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್ ಉದ್ಘಾಟಿಸಲಿದ್ದು, ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ರಿ. ಉಚ್ಚಿಲ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ಗೀತಾನಂದ ಫೌಂಡೇಷನ್ ಕೋಟ ಪ್ರವರ್ತಕರಾದ ಶ್ರೀ ಆನಂದ ಸಿ. ಕುಂದರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಯವರು ಭಾಗವಹಿಸಲಿದ್ದಾರೆ.
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟಿದ್ದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೮ ಶಾಖೆಗಳ ಮೂಲಕ ವ್ಯವಹಾರ ನಡೆಸುತ್ತಿದೆ. ಬ್ಯಾಂಕ್ ಪ್ರಸ್ತುತ್ಲ ೩೪೭ ಕೋಟಿ ಠೇವಣಿÀ ಹಾಗೂ ೨೬೫ ಕೋಟಿ ಸಾಲ ಮತ್ತು ಮುಂಗಡದೊAದಿಗೆ ೬೦೫ ಕೋಟಿ ವ್ಯವಹಾರ ನಡೆಸಿದ್ದು, ಕಳೆದ ೧೩ ವರ್ಷಗಳಿಂದ ಸದಸ್ಯರಿಗೆ ಶೇ. ೧೮ ಡಿವಿಡೆಂಡ್ ನೀಡುತ್ತಿರುವ ಮೂಲಕ ಕರಾವಳಿ ಭಾಗದ ಏಕೈಕ ಪಟ್ಟಣ ಸಹಕಾರಿ ಬ್ಯಾಂಕ್ ಹೆಗ್ಗಳಿಕೆಗೆ ಪಾತ್ರವಾಗಿದೆ.
ಬ್ಯಾಂಕಿ0ಗ್ ಕ್ಷೇತ್ರದ ಆಧುನಿಕ ಸೌಲಭ್ಯಗಳೊಂದಿಗೆ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿರುವ ಬ್ಯಾಂಕ್, ವಿದ್ಯಾರ್ಥಿಗಳಿಗೆ ಮಹಾಲಕ್ಷಿö್ಮÃ ವಿದ್ಯಾಸಿರಿ ಝೀರೋ ಬ್ಯಾಲೆನ್ಸ್ ಉಳಿತಾಯ ಖಾತೆ ಯೋಜನೆ ಆರಂಭಿಸಿದ್ದು, ಗ್ರಾಹಕರ ಸಮಾವೇಶದ ಪ್ರಯುಕ್ತ ಠೇವಣಿಗಳಿಗೆ ಶೇ. ೦.೪೦% ಅಧಿಕ ಬಡ್ಡಿ, ಸಂಘ ಸಂಸ್ಥೆಗಳ ರೂ. ೨೫ ಲಕ್ಷ ಮೇಲ್ಪಟ್ಟ ಠೇವಣಿಗಳಿಗೆ (ಒಂದು ವರ್ಷ ಮೇಲ್ಪಟ್ಟ ಅವಧಿ) ಶೇ. ೮.೫% ಬಡ್ಡಿ ನೀಡಲಾಗುತ್ತಿದ್ದು, ಆಜಾದಿ ಕಾ ಅಮೃತ್ ಮಹೋತ್ಸವದ ವರ್ಷಾಚರಣೆಯ ಅಂಗವಾಗಿ ವೈಯಕ್ತಿಕ ಉಳಿತಾಯ ಖಾತೆಯಲ್ಲಿ ರೂ. ೨ ಲಕ್ಷ ಮೇಲ್ಪಟ್ಟ ಠೇವಣಿಗಳಿಗೆ ಹೆಚ್ಚುವರಿ ಶೇ. ೦.೫೦ ಬಡ್ಡಿ ಹಾಗೂ ಸಹಕಾರಿ ಸಂಘ ಮತ್ತು ಸಂಘ ಸಂಸ್ಥೆಗಳ ಉಳಿತಾಯ ಖಾತೆಯಲ್ಲಿ ರೂ. ೫ ಲಕ್ಷ ಮೇಲ್ಪಟ್ಟ ಠೇವಣಿಗೆ ಶೇ. ೧.೦ ಬಡ್ಡಿ ನೀಡಲಾಗುತ್ತಿದ್ದು ಗ್ರಾಹಕರು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…