ಮಾರ್ಚ್ 22 ರ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ : ಡಿಕೆ ಶಿವಕುಮಾರ್
ಬೆಂಗಳೂರು: ಮಾರ್ಚ್ 22 ರಂದು ಕನ್ನಡ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಕಲಾಪದ ವೇಳೆ ವಿಪಕ್ಷ ನಾಯಕ ನಾರಾಯಣಸ್ವಾಮಿ ವಿಷಯ ಪ್ರಸ್ತಾಪ ಮಾಡಿದರು. ಮಾರ್ಚ್ 22ರಂದು ಕನ್ನಡ ಸಂಘಟನೆಗಳು ಬಂದ್‌ಗೆ ಕರೆ ಕೊಟ್ಟಿದ್ದಾರೆ. ಮಾರ್ಚ್ 22ರಂದು ಎಸ್‌ಎಸ್‌ಎಲ್‌ಸಿ ಸೇರಿ ಅನೇಕ ಪರೀಕ್ಷೆಗಳು ನಡೆಯಲಿವೆ. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಿಂದ ಮಕ್ಕಳಿಗಳು ಭಯ ಭೀತರಾಗಿದ್ದರು. ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯ ಮಾಡಿದರು.
ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಉತ್ತರ ನೀಡಿ ಸದ್ಯಕ್ಕೆ ಈ ಬಂದ್ ಅವಶ್ಯಕತೆ ಇರಲಿಲ್ಲ. ಸಂಘಟನೆಗಳು ಸರ್ಕಾರದ ಜೊತೆ ಮಾತಾಡಬೇಕಿತ್ತು. ನಾನು ಕೂಡಾ ಮಾರ್ಚ್ 22ರಂದು ವರ್ಲ್ಡ್ ವಾಟರ್ ಡೇ ಮಾಡಬೇಕು ಅಂತ ಇದ್ದೆ. ಬಂದ್‌ಗೆ ನಾವು ಬೆಂಬಲ ಕೊಡಲ್ಲ. ನಾವು ಬಂದ್ ಮಾಡೋರಿಗೆ ತಿಳುವಳಿಕೆ ಕೊಡುತ್ತೇವೆ. ಮಕ್ಕಳಿಗೆ ಎಕ್ಸಾಂ ಶುರುವಾಗಿದೆ. ಅಧಿಕಾರಿಗಳ ಜೊತೆ ಮಾತಾಡಿ ಮತ್ತೊಮ್ಮೆ ಹೇಳಿಕೆ ಕೊಡೋದಾಗಿ ತಿಳಿಸಿದರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…