ಮಾರ್ಚ್ 23ರಿಂದ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

Featured, ಉಡುಪಿ, ದಕ್ಷಿಣ ಕನ್ನಡ

ಮಾರ್ಚ್ 23ರಿಂದ ಮೂರು ದಿನ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಸುಡು ಬಿಸಿಲಿನಿಂದ ಕರ್ನಾಟಕವೇ ಸುಡುತ್ತಿದೆ. ಅದರಲ್ಲೂ ಕರಾವಳಿ ಭಾಗದ ಬಗ್ಗೆಯಂತೂ ಹೇಳತೀರದು. ಈ ನಡುವೆ ಕೆಲವೆಡೆ ಈಗಾಗಲೇ ಮಳೆ ತಂಪೆರೆದಿದೆ. ಮಾರ್ಚ್ 25ರ ವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಲಿದೆ ಎಂದು ಭಾರತಿಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕಚೇರಿ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಇಂದಿನಿಂದ ಒಳನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಪ್ರತ್ಯೇಕ ದಿನಗಳಲ್ಲಿ ಮಳೆ ಬರಲಿದೆ ಎಂದು ತಿಳಿಸಲಾಗಿದೆ. ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಸಾಧ್ಯತೆ ಇದೆ.

ಹವಾಮಾನದಲ್ಲಿ ತೀವ್ರ ತರಹದ ಬದಲಾವಣೆಗಳು ಆಗಿವೆ. ಸಮುದ್ರ ಮೇಲ್ಮೈ ಸುಳಿಗಾಳಿಯ ತೀವ್ರತೆ ಹೆಚ್ಚಾದ ಪರಿಣಾಮ ಮಳೆಯಾಗುತ್ತಿದೆ. ಇಂದಿನಿಂದ (ಮಾರ್ಚ್ 19-21) ಮೂರು ದಿನ ಒಳನಾಡು ಜಿಲ್ಲೆಗಳಾದ ಬೀದರ್, ರಾಯಚೂರು ಮತ್ತು ಕೊಪ್ಪಳದ ಕೆಲವೆಡೆ ಮಳೆ ಸುರಿಯಲಿದೆ.

ಎಲ್ಲೆಲ್ಲಿ ಮಳೆ?

ಮಾರ್ಚ್ 22ರಂದು ಇಲ್ಲೆಲ್ಲಾ ವ್ಯಾಪಕ ಮಳೆ ಮಾರ್ಚ್ 22ರಂದು ಕೊಪ್ಪಳ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಮತ್ತು ಚಿತ್ರದುರ್ಗದಲ್ಲಿ ಮಳೆ ಆರ್ಭಟಿಸಲಿದೆ.

ಮಾರ್ಚ್ 23ರಿಂದ ಮಾರ್ಚ್ 25ರವರೆಗೆ ಮೂರು ದಿನ ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಜಿಲ್ಲೆಗಳು ಒಳಗೊಂಡಂತೆ ಒಂದು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ವಿವಿಧೆಡೆ ವ್ಯಾಪಕ ಮಳೆ ಆಗುವ ನಿರೀಕ್ಷೆಗಳು ಇವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 

Leave a Reply