ಮಾರ್ಚ್ 27ರಿಂದ ಅಂತಾರಾಷ್ಟ್ರೀಯ ವಿಮಾನ ಸೇವೆ ಪುನರಾರಂಭ -Vishwanews24

Featured, ರಾಷ್ಟ್ರ ನ್ಯೂಸ್

ಮಾರ್ಚ್ 27ರಿಂದ ಅಂತಾರಾಷ್ಟ್ರೀಯ ವಿಮಾನ ಸೇವೆ ಪುನರಾರಂಭ -Vishwanews24

ನವದೆಹಲಿ: ಕೊರೊನಾದಿಂದಾಗಿ ಕಳೆದೆರಡು ವರ್ಷದಿಂದ ನಿರ್ಬಂಧಕ್ಕೊಳಗಾಗಿದ್ದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಮಾರ್ಚ್ 27ರಿಂದ ಪುನರಾರಂಭಗೊಳ್ಳಲಿದೆ.

ಕೊರೊನಾದಿಂದಾಗಿ ಸುರಕ್ಷತೆ ದೃಷ್ಟಿಯಿಂದ ಭಾರತ ವಿಮಾನಯಾನ ಸಚಿವಾಲಯವು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ನಿರ್ಬಂಧಿಸಿತ್ತು. ಇದೀಗ ನಿರ್ಬಂಧ ತೆರವುಗೊಳಿಸಿ ಮಾರ್ಚ್ 27ರಿಂದ ವಾಣಿಜ್ಯ ಹಾಗೂ ಎಲ್ಲಾ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಪುನರಾರಂಭಿಸಲಾಗುತ್ತದೆ ಎಂದು ವಿಮಾನಯಾನ ಸಚಿವಾಲಯ ಪ್ರಕಟನೆ ಹೊರಡಿಸಿದೆ.

ಭಾರತ ಸೇರಿದಂತೆ ಎಲ್ಲಾ ರಾಷ್ಟ್ರಗಳಲ್ಲೂ ಪ್ರಸ್ತುತ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಭಾರತ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಿಸುತ್ತಿದೆ.ಕಳೆದ ವರ್ಷದಿಂದ ಭಾರತ ಏರ್‌ಬಬಲ್ ಮೂಲಕ ವಿಮಾನಯಾನ ಸೇವೆ ನೀಡುತ್ತಿದ್ದು, ಈ ವ್ಯವಸ್ಥೆಯಡಿ 31 ದೇಶಗಳಿಗೆ ಮಾತ್ರ ವಿಮಾನಯಾನ ಇತ್ತು.

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ – Vishwanews24

Leave a Reply