ಮಾರ್ಚ್ 4 ರಿಂದ 19ರ ತನಕ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ; ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆ 2020ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಆಕ್ಷೇಪಣೆಗಳಿದ್ದರೆ ಸಲ್ಲಿಕೆ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಚ್ 4 ರಿಂದ 19ರ ತನಕ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.

2019 -20 ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆ ಮಾರ್ಚ್ 4 ರಿಂದ 19 ರವರೆಗೆ ಪರೀಕ್ಷೆ ನಡೆಯಲಿದ್ದು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಇಲಾಖೆಗೆ ಸಲ್ಲಿಸಲು ಸೂಚನೆ ನೀಡಲಾಗಿದೆ. ಬರುವ ಆಕ್ಷೇಪಣೆಗಳನ್ನು ಸ್ವೀಕರಿಸಿದ ಬಳಿಕ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

  1. ಮಾರ್ಚ್ –  ಇಂಗ್ಲಿಷ್, ಭೌತಶಾಸ್ತ್ರ, ಬೇಸಿಕ್ ಮ್ಯಾಥ್ಸ್
  2. ಮಾರ್ಚ್ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್,
  3. ಮಾರ್ಚ್ 6  – ಉರ್ದು, ಸಂಸ್ಕೃತ
  4. ಮಾರ್ಚ್ 7  –  ತರ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ
  5. ಮಾರ್ಚ್ 9  –  ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ
  6. ಮಾರ್ಚ್ 11  –  ರಾಜ್ಯಶಾಸ್ತ್ರ, ಸ್ಟಾಟಿಸ್ಟಿಕ್ಸ್,
  7. ಮಾರ್ಚ್ 12  –  ಬಿಸಿನೆಸ್ ಸ್ಟಡೀಸ್, ಸಮಾಜಶಾಸ್ತ್ರ, ರಸಾಯನಶಾಸ್ತ್ರ
  8. ಮಾರ್ಚ್ 13  –  ಭೂಗೋಳಶಾಸ್ತ್ರ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಸ್ತಾನಿ ಸಂಗೀತ
  9. ಮಾರ್ಚ್ 14  –  ಮನೋವಿಜ್ಞಾನ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ
  10. ಮಾರ್ಚ್ 16  –  ಅರ್ಥಶಾಸ್ತ್ರ, ಜೀವಶಾಸ್ತ್ರ,
  11. ಮಾರ್ಚ್ 17  –  ಹಿಂದಿ
  12. ಮಾರ್ಚ್ 18  –  ಕನ್ನಡ
  13. ಮಾರ್ಚ್ 19-   ಇಂಗ್ಲಿಷ್ ವಿಷಯದ ಪರೀಕ್ಷೆಗಳು ನಡೆಯಲಿವೆ.