ಮಂಗಳೂರು: ರಾಮ–ಲಕ್ಷ್ಮಣ ಜೋಡುಕರೆ ಕಂಬಳದ ನಾಲ್ಕನೇ ವರ್ಷದ ‘ಮಂಗಳೂರು ಕಂಬಳೋತ್ಸವ’ ಮಾರ್ಚ್ 6ರಂದು ಮಂಗಳೂರಿನ ಬಂಗ್ರ ಕೂಳೂರು ಬಳಿಯ ಗೋಲ್ಡ್‌ಪಿಂಚ್ ಸಿಟಿಯಲ್ಲಿ ನಡೆಯಲಿದೆ ಎಂದು ಕಂಬಳದ ಸಾರಥ್ಯ ವಹಿಸಿರುವ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಮನೆ ಮೇಲೆ ಪೊಲೀಸರ ದಾಳಿ -Vishwanews24
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಾರಿ ನಾಲ್ಕನೇ ವರ್ಷವಾಗಿದ್ದು, ಹಿರಿಯರು ಹಾಗೂ ಜಿಲ್ಲಾ ಕಂಬಳ ಸಮಿತಿ ಸಹಕಾರದಲ್ಲಿ ಯುವಜನತೆ ಸೇರಿಕೊಂಡು ಕಂಬಳೋತ್ಸವ ನಡೆಸುತ್ತಿದ್ದೇವೆ. ಪ್ರತಿವರ್ಷದಂತೆ ಆರು ವಿಭಾಗಗಳಲ್ಲಿ ಸುಮಾರು 120 ಜೋಡಿ ಕೋಣಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಎಂ.ಆರ್.ಜಿ. ಗ್ರೂಪ್ ಸಿಎಂಡಿ ಕೆ.ಪ್ರಕಾಶ್ ಶೆಟ್ಟಿ ಅವರ ಗೌರವಾಧ್ಯಕ್ಷತೆಯ ಸಮಿತಿ ಮೂಲಕ ಸಕಲ ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲೂ ನೇರ ಪ್ರಸಾರ ಇರಲಿದೆ’ ಎಂದರು.
ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24
ಮಾ.6ರಂದು ಬೆಳಿಗ್ಗೆ 8.30ಕ್ಕೆ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಚಾಲನೆ ನೀಡಲಿದ್ದಾರೆ. ಸಂಜೆ 6ಕ್ಕೆ ನಡೆಯುವ ಸಮಾರಂಭದಲ್ಲಿ ಕೇಂದ್ರ ಸಚಿವ ಸದಾನಂದ ಗೌಡ, ಸಂಸದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಮಾರ್ಚ್ 7ರಂದು ಬೆಳಿಗ್ಗೆ 8ಕ್ಕೆ ಜಿಪಂ ಅಧ್ಯಕ್ಷ ಕಸ್ತೂರಿ ಪಂಜ ಅಧ್ಯಕ್ಷತೆಯಲ್ಲಿ ಸಮಾರೋಪ ನಡೆಯಲಿದೆ.
ಈ ಬಾರಿ ಕಂಬಳದಲ್ಲಿ ಚಿತ್ರಕಲೆ ಹಾಗೂ ಛಾಯಾಚಿತ್ರ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಮಾ.6ರಂದು ಬೆಳಿಗ್ಗೆ 10 ಗಂಟೆ ಮೊದಲು ನೋಂದಣಿ ಕಡ್ಡಾಯ. ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ಬಹುಮಾನಗಳಿವೆ. ಕಂಬಳದಲ್ಲಿ ಮಹಿಳಾ ಜಾಕಿ ಪಾಲ್ಗೊಳ್ಳಲಿದ್ದಾರೆ ಎಂದರು.
ಉಡುಪಿ : ಮಾ. 10 ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆ ಕಾರ್ಯಕ್ರಮ -Vishwanews24
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…
ಪುತ್ತೂರು: ಬ್ರೇಕ್ ಫೇಲ್ ಆಗಿ ಮನೆಯ ಕಾಂಪೌಂಡ್‌ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…
ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…
ಅಲಹಾಬಾದ್ ಹೈಕೋರ್ಟ್ ತೀರ್ಪು ಇಸ್ಲಾಂ ಧರ್ಮದ ಮೇಲಿನ ದಾಳಿ ನಮ್ಮ ಧರ್ಮ, ನಾವೇ ನಿರ್ಧರಿಸುತ್ತೇವೆ : ಓವೈಸಿ ಆಕ್ರೋಶ ಹೈದರಾಬಾದ್:…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಧಾರಾಕಾರ ಮಳೆ : ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಾಗಿಲಿನವರೆಗೂ ನುಗ್ಗಿದ ನೀರು ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ…
ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ : ಬೆಂಬಲ ಕೋರಿ ಸಿಎಂಗೆ ಪತ್ರ ಬರೆದ ಕ್ಯಾ.ಚೌಟ ಮಂಗಳೂರು: ಮಂಗಳೂರು…