Featured

ಮಾರ್ಚ್23-24 ರಂದು ಸುಗ್ಗಿ ಮಾರಿಪೂಜೆ ಹಿನ್ನಲೆ -ಕಾಪು-ಮಜೂರು-ಮೂಳೂರು -ಪಡು ಎಲ್ಲಾ ಬಾರ್ ವೈನ್ ಶಾಪ್ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ.-vishwanews24

ಮಾರ್ಚ್23-24 ರಂದು ಸುಗ್ಗಿ ಮಾರಿಪೂಜೆ ಹಿನ್ನಲೆ -ಕಾಪು-ಮಜೂರು-ಮೂಳೂರು -ಪಡು ಎಲ್ಲಾ ಬಾರ್ ವೈನ್ ಶಾಪ್ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ.

ಕಾಪು: ಕಾಪು ತಾಲೂಕಿನ ಕಾಪುವಿನ ಮೂರು ಮಾರಿಗುಡಿಗಳಲ್ಲಿ ದಿನಾಂಕ 23/03/2021 ಮತ್ತು ದಿನಾಂಕ 24/03/2021 ರಂದು ಸುಗ್ಗಿ ಮಾರಿ ಪೂಜೆಯು ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಭೇಟಿ ನೀಡಲಿದ್ದು ಸದ್ರಿ ಮೂರು ಮಾರಿ ಗುಡಿಗಳು ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕದಲ್ಲಿ ಇರುವುದರಿಂದ ಮಾರಿ ಪೂಜೆಗೆ ಬರುವವರ ಪೈಕಿ ಕೆಲವರು ಮಧ್ಯ ಸೇವಿಸಿ, ಅಮಲಿನಲ್ಲಿ ರಸ್ತೆ ದಾಟುವ ಬಗ್ಗೆ ಹಾಗೂ ರಾತ್ರಿ ವೇಳೆಗೆ ದೇವಸ್ಥಾನಕ್ಕೆ ಬರುವ ಜನರೊಂದಿಗೆ ಮದ್ಯ ಸೇವಿಸಿದವರು ಅಮಲಿನಲ್ಲಿ ಅಸಭ್ಯವಾಗಿ ವರ್ತಿಸುವ ಸಾಧ್ಯತೆ ಇದ್ದು, ಅಲ್ಲದೇ ರಸ್ತೆ ಅಪಘಾತಗಳು ನಡೆಯುವ ಸಾಧ್ಯತೆಯೂ ಇರುತ್ತದೆ. ಇದರಿಂದ ಕಾನೂನು ಸುವ್ಯಸ್ಥೆಗೆ ಧಕ್ಕೆಯಾಗುವ ಸಂಭವ ಇರುವುದಾಗಿದೆ. ಆದುದರಿಂದ ದಿನಾಂಕ: 23/03/2021 ಬೆಳಿಗ್ಗೆ 06:00 ಗಂಟೆಯಿಂದ ದಿನಾಂಕ 24/03/2021 ರ ರಾತ್ರಿ 12:00 ಗಂಟೆಯವರಗೆ ಸದ್ರಿ ಕಾಪು ಠಾಣಾ ವ್ಯಾಪ್ತಿಯ ಕಾಪು ಪಡು, ಮೂಳೂರು, ಮಜೂರು ಗ್ರಾಮದಲ್ಲಿರುವ ಬಾರ್ & ರೆಸ್ಟೋರೆಂಟ್, ವೈನ್ ಶಾಪಗಳನ್ನು ಸಂಪೂರ್ಣವಾಗಿ ಬಂದ್ ಮಾಡಿಸಿ ಮದ್ಯ ಮಾರಾಟವನ್ನು ನಿಷೇಧಿಸುವಂತೆ ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಇವರು ಪತ್ರದಲ್ಲಿ ಕೋರಿರುತ್ತಾರೆ,

ಪೊಲೀಸ್ ಅಧೀಕ್ಷಕರು ಉಡುಪಿ ಜಿಲ್ಲೆ ಇವರು ನೀಡಿರುವ ವರದಿಯಂತೆ ದಿನಾಂಕ:23/03/2021 ಮತ್ತು ದಿನಾಂಕ:24/03/2021 ರಂದು ಕಾಪು ತಾಲೂಕಿನ ಕಾಪುವಿನ ಮಾರಿ ಗುಡಿಗಳಲ್ಲಿ ನುಗ್ಗಿ ಮಾರಿ ಪೂಜೆಯು ನಡೆಯುವ ಸಂದರ್ಭದಲ್ಲಿ ಬಾರ್ ಮತ್ತು ವ್ಯನ್‌ಶಾಪ್‌ಗಳು ತರದಿದ್ದಲ್ಲಿ, ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಜಿ ಜಗದೀಶ ಭಾ.ಆ.ಸೇ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಉಡುಪಿ ಜಿಲ್ಲೆ ಆದ ನಾನು ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1961 ಕಲಂ 21ರನ್ವಯ ಅಧಿಕಾರವನ್ನು ಚಲಾಯಿಸಿ ಕಾಪು ಠಾಣಾ ವ್ಯಾಪ್ತಿಯ ಕಾಪು ಪಡು, ಮೂಳೂರು, ಮಜೂರು ಗ್ರಾಮಗಳ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‌ಗಳ ಮದ್ಯ ಮಾರಾಟವನ್ನು ದಿನಾಂಕ:23/03/2021 ರ ಬೆಳಿಗ್ಗೆ 6.00 ಗಂಟೆಯಿಂದ ದಿನಾಂಕ:24/03/2021 ರಂದು ರಾತ್ರಿ 12.00 ಗಂಟೆಯವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿದೆ. ಈ ಹಿನ್ನಲೆಯಲ್ಲಿ ಮೇಲೆ ತಿಳಿಸಲಾದ ದಿನಾಂಕದಂದು ಕಾಪು ಠಾಣಾ ವ್ಯಾಪ್ತಿಯ ಕಾಪು ಪಡು, ಮೂಳೂರು, ಮಜೂರು ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ (Dry Day) ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಎಂದು ಪ್ರಕಟನೆ ತಿಳಿಸಿದೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

48 minutes ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

58 minutes ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

1 hour ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

1 hour ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

2 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

2 hours ago