ಚಿಕ್ಕಮಗಳೂರು: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಗೆ ಕಳುಹಿಸಿದ ಘಟನೆ ಚಿಕ್ಕಮಗಳೂರಿನ ಖಾಸಗಿ ಖಾಲೇಜಿನಲ್ಲಿ ನಡೆದಿದೆ.
ಕಾಲೇಜಿನ ಸಮವಸ್ತ್ರದ ಜೊತೆ ಇಬ್ಬರು ಕಪ್ಪು ವಸ್ತ್ರ ಧರಿಸಿದ್ದರು. ಇದರಿಂದಾಗಿ ಮಾಲೆ ತೆಗೆದು ಬನ್ನಿ ಎಂದು ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ಹೊರಗೆ ನಿಲ್ಲಿಸಿದೆ. ಕಾಲೇಜಿಗೆ ಹಿಂದೂ ಸಂಘಟನೆಗಳ ಮುಖಂಡರು, ಬಜರಂಗದಳದ ಮುಖಂಡರು, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬುರ್ಖಾ ಹಾಕಿಕೊಂಡು ಬರ್ತಾರಲ್ಲ ಅವಾಗ ಸುಮ್ಮನಿರುತ್ತೀರಿ. ಈಗ ಯಾಕೆ ಸಮಸ್ಯೆ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.
ಈ ವರ್ಷದಿಂದ ಮಾಲೆ ಹಾಕಿ ಬರುವಂತಿಲ್ಲ ಎಂದು ಆದೇಶವಾಗಿದೆ ಎಂದ ಆಡಳಿತ ಮಂಡಳಿ ಹೇಳಿದೆ. ಅದು ಸರ್ಕಾರದ ಆದೇಶವಲ್ಲ. ಕಾಲೇಜು ಆಡಳಿತ ಮಂಡಳಿ ಮಾಡಿಕೊಂಡಿರೋ ಆದೇಶ. ಸರ್ಕಾರಿ ಅಧಿಕಾರಿಗಳೇ ಮಾಲೆ ಹಾಕಿ ಕೆಲಸ ಮಾಡ್ತಾರೆ ಎಂದು ಬಿಜೆಪಿ-ಬಜರಂಗದಳ ಕಾರ್ಯಕರ್ತರು ವಾದಿಸಿದ್ದಾರೆ.
ಪ್ರಿನ್ಸಿಪಾಲ್ ರೂಮ್‍ನಲ್ಲೇ ಕಾರ್ಯಕರ್ತರು ಅಯ್ಯಪ್ಪ ಸ್ವಾಮಿ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಅಂತಿಮವಾಗಿ ವಿದ್ಯಾರ್ಥಿಗಳನ್ನ ತರಗತಿಯಲ್ಲಿ ಕೂರಿಸಲು ಆಡಳಿತ ಮಂಡಳಿ ಒಪ್ಪಿಕೊಂಡಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…