Featured

ಮಾವಿನ ಮರದಿಂದ ಮಿಡಿ ಕೊಯ್ಯುವಾಗ ಆಯಾ ತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿ ಮೃತ್ಯು..vishwanews24

ಮಾವಿನ ಮರದಿಂದ ಮಿಡಿ ಕೊಯ್ಯುವಾಗ ಆಯಾ ತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿ ಮೃತ್ಯು..

ಕಡಬ : ಮಾವಿನ ಮರದಿಂದ ಮಿಡಿ ಕೊಯ್ಯುವಾಗ ಆಯಾ ತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡದ ಉಪ್ಪಿನಂಗಡಿ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ.

ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ (48.)ಮೃತಪಟ್ಟ ದುರ್ದೈವಿಯಾಗಿದ್ದಾರೆ . ಬೆಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದ ರಮೇಶ ಪತ್ನಿ ಹಾಗೂ ಮಕ್ಕಳೊಂದಿಗೆ ಹೊಸಮಜಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಜೆಯಲ್ಲಿ ಊರಿಗೆ ಬಂದಿದ್ದ ವೇಳೆ ಮನೆ ಸಮೀಪದ ಮಾವಿನ ಮರಕ್ಕೆ ಮಾವಿನ ಮಿಡಿ ಕೊಯ್ಯಲೆಂದು ಹತ್ತಿದಾಗ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮೃತರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

11 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

12 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

13 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

14 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

14 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

15 hours ago